ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ/ ಅತಿಥಿ ಉಪನ್ಯಾಸಕರ ಭರ್ತಿಗೆ ಕಾಲೇಜು ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಅರ್ಹ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
ಗ್ರಂಥಪಾಲಕರು ಹಾಗೂ ದೈಹಿಕ ಶಿಕ್ಷಣ ಬೋಧಕರು ಸೇರಿದಂತೆ ವಿವಿಧ ವಿಷಯ ಬೋಧನೆಗೆ ಅತಿಥಿ ಉಪನ್ಯಾಸಕರ ನೇಮಕಾತಿ ನಡೆಸಲಾಗುತ್ತದೆ.
ಅಭ್ಯರ್ಥಿಗಳು ಎರಡು ವರ್ಷದ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ಪಿಹೆಚ್​ಡಿ ವಿದ್ಯಾರ್ಹತೆ ಅಥವಾ ಎನ್​ಇಟಿ, ಕೆ-ಸೆಟ್​​, ಎಸ್​ಎಸ್​ಎಲ್​ಇಟಿ ವಿದ್ಯಾರ್ಹತೆ, ಎಂಫಿಲ್​ ವಿದ್ಯಾರ್ಹತೆ ಪಡೆದವರಿಗೆ ಹೆಚ್ಚಿನ ಅವಕಾಶ ಲಭ್ಯವಿದೆ.
ಅಭ್ಯರ್ಥಿಗಳು ಈಗಾಗಲೇ ಹಿಂದಿನ ವರ್ಷಗಳಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿರಬೇಕು.ಅಭ್ಯರ್ಥಿಗಳನ್ನು ಮೆರಿಟ್​ ಲಿಸ್ಟ್​ ಮತ್ತು ಕೌನ್ಸಿಲಿಂಗ್​ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅತಿಥಿ ಉಪನ್ಯಾಸಕರಿಗೆ ಗೌರವಧನ..
5 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿರುವ ಹಾಗೂ ಯುಜಿಸಿ ನಿಗದಿ ಪಡಿಸಿದ ವಿದ್ಯಾರ್ಹತೆ ಹೊಂದಿರುವವರಿಗೆ: 35,000 ರೂ.
ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿರುವ ಹಾಗೂ ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ: 31,000 ರೂ.
5 ವರ್ಷ ಹಾಗೂ ಅದಕ್ಕಿಂತ ಹೆಚ್ಚಿನ ಮತ್ತು 10 ವರ್ಷಕ್ಕಿಂತ ಕಡಿಮೆ ಸೇವ ಸಲ್ಲಿಸಿರುವ ಹಾಗೂ ಯುಜಿಸಿ ನಿಗದಿ ಪಡಿಸಿದ ವಿದ್ಯಾರ್ಹತೆ ಹೊಂದಿರುವವರಿಗೆ: 38,000 ರೂ.
5 ವರ್ಷ ಹಾಗೂ ಅದಕ್ಕಿಂತ ಹೆಚ್ಚಿನ ಮತ್ತು 10 ವರ್ಷಕ್ಕಿಂತ ಕಡಿಮೆ ಸಲ್ಲಿಸಿರುವ ಹಾಗೂ ಯುಜಿಸಿ ನಿಗದಿ ಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ 35,000 ರೂ.
10 ವರ್ಷ ಹಾಗೂ ಅದಕ್ಕಿಂತ ಹೆಚ್ಚಿನ ಮತ್ತು 15 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿರುವ ಹಾಗೂ ಯುಜಿಸಿ ನಿಗದಿ ಪಡಿಸಿದ ವಿದ್ಯಾರ್ಹತೆ ಹೊಂದಿರುವವರಿಗೆ 39,000 ರೂ.
10 ವರ್ಷ ಹಾಗೂ ಅದಕ್ಕಿಂತ ಹೆಚ್ಚಿನ ಮತ್ತು 15 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿರುವ ಹಾಗೂ ಯುಜಿಸಿ ನಿಗದಿ ಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ 35,000 ರೂ.
15 ವರ್ಷ ಮತ್ತು ಅದಕ್ಕಿಂತ ಹಚ್ಚಿನ ಸೇವೆ ಸಲ್ಲಿಸಿರುವ ಹಾಗೂ ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿರುವವರಿಗೆ 40,000 ರೂ.
15 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಸೇವೆ ಸಲ್ಲಿಸಿರುವ ಹಾಗೂ ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ 36,000 ರೂ.
ಅಭ್ಯರ್ಥಿಗಳು ಈ ಹುದ್ದೆಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಆಗಸ್ಟ್​​ 31ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್​ 7 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಕೆ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಇನ್ನಿತರ ಮಾಹಿತಿಗಳಿಗೆ ಅಭ್ಯರ್ಥಿಗಳು dce.karnataka.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ ಮುಜರಾಯಿ ದೇಗುಲಗಳಲ್ಲಿ ಪೂಜೆ, ಪ್ರಸಾದಕ್ಕೆ ʼನಂದಿನಿ ತುಪ್ಪʼದ ಬಳಕೆ ಕಡ್ಡಾಯ: ಸರ್ಕಾರ ಆದೇಶ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement