ಹಂಗೇರಿ | ಯೂತ್ ವಲ್ಡ್ ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ; ಉತ್ತರ ಕನ್ನಡದ ಧನ್ವಿತಾ ಮೊಗೇರ ವಲ್ಡ್ ಚಾಂಪಿಯನ್

ಕಾರವಾರ : ಯುರೋಪಿನ ಹಂಗೇರಿಯಲ್ಲಿ ನಡೆದ ಯೂತ್ ವಲ್ಡ್ ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಉತ್ತರ ಕನ್ನಡ ಜಿಲ್ಲೆಯ ಧನ್ವಿತಾ ವಾಸು ಮೊಗೇರ ಚಿನ್ನದ ಪದಕ ಗೆದ್ದು ವಲ್ಡ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾಳೆ.
ಪ್ರಪ್ರಥಮ ಬಾರಿಗೆ ಉತ್ತರ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳು ವಾಕೊ ಯೂಥ್ ವರ್ಲ್ಡ್ ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್ -2024 ರಲ್ಲಿ ಭಾರತ ಪ್ರತಿನಿಧಿಸಿದ್ದರು. ಇದು ಯುರೋಪಿನ ಹಂಗೇರಿಯ ಬುಡಾಪೆಸ್ಟ್ ನಲ್ಲಿ ಅಗಸ್ಟ್ 23 ರಿಂದ ಸಪ್ಟೆಂಬರ್ 1 ರ ತನಕ ನಡೆಯುತ್ತಿದೆ.

ಕಿಕ್ ಬಾಕ್ಸಿಂಗ್ ಸ್ಪರ್ಧೆಯ 7 ರಿಂದ 9 ವರ್ಷ ವಯೋಮಿತಿಯ ಬಾಲಕಿಯರ -18 ಕೆ.ಜಿ. ಪಾಯಿಂಟ್ ಫೈಟ್ ವಿಭಾಗದಲ್ಲಿ ಕರ್ನಾಟಕ ರಾಜ್ಯ ಪ್ರತಿನಿಧಿಸಿದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಕಿಕ್ ಬಾಕ್ಸಿಂಗ್ ಪಟು ಧನ್ವಿತಾ ವಾಸು ಮೊಗೇರ ಚಿನ್ನದ ಪದಕವನ್ನು ಗೆದ್ದು ವಲ್ಡ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾಳೆ. ಅವನಿ ಸೂರಜ್ ರಾವ್ ಮ್ಯೂಸಿಕಲ್ ಫಾರ್ಮ್ ಹಾರ್ಡ್ ಸ್ಟೈಲ್ ನಲ್ಲಿ ಬೆಳ್ಳಿಯ ಪದಕ ಪಡೆದಿದ್ದಾಳೆ.
ನಾಗಶ್ರೀಯವರು ಭಾರತ ತಂಡದ ಕೋಚ್ ಆಗಿ ಭಾಗವಹಿಸಿದ್ದಾರೆ.ವಿದ್ಯಾರ್ಥಿನಿಯರು ಭಟ್ಕಳದ ನಾಗಶ್ರೀ ಮಾರ್ಷಲ್ ಆರ್ಟ್ಸ್ & ಫಿಟ್ನೆಸ್ ನಲ್ಲಿ ಕಿಕ್ ಬಾಕ್ಸಿಂಗ್ ತರಬೇತಿಯನ್ನು ಪಡೆಯುತ್ತಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕದ ಮುಜರಾಯಿ ದೇಗುಲಗಳಲ್ಲಿ ಪೂಜೆ, ಪ್ರಸಾದಕ್ಕೆ ʼನಂದಿನಿ ತುಪ್ಪʼದ ಬಳಕೆ ಕಡ್ಡಾಯ: ಸರ್ಕಾರ ಆದೇಶ

ಅಂತಾರಾಷ್ಟ್ರೀಯ ಪದಕ ಗೆದ್ದ ಕಿಕ್ ಬಾಕ್ಸಿಂಗ್ ಪಟುಗಳಿಗೆ ವಾಕೊ ಕರ್ನಾಟಕ ರಾಜ್ಯ ಕಿಕ್ ಬಾಕ್ಸಿಂಗ್ ನ ಅಧ್ಯಕ್ಷರಾದ ಸಂತೋಷ ಕೆ, ಪ್ರಧಾನ ಕಾರ್ಯದರ್ಶಿಚಪೂಜಾ ಹರ್ಷ, ರಾಷ್ಟ್ರ ಮಟ್ಟದ ಕಿಕ್ ಬಾಕ್ಸಿಂಗಿನ ಕೋಚ್ ಹರ್ಷ ಶಂಕರ, ಉತ್ತರಕನ್ನಡ ಜಿಲ್ಲೆಯ ಕಿಕ್ ಬಾಕ್ಸಿಂಗ್ ಸ್ಪೋರ್ಟ್ಸ್ ಅಸೋಸಿಯೇಷನ್ ನ ಅಧ್ಯಕ್ಷ ಈಶ್ವರ ನಾಯ್ಕ, ನಾಗಶ್ರೀ ಮಾರ್ಷಲ್ ಆರ್ಟ್ಸ್ ನ ಕಿಕ್ ಬಾಕ್ಸಿಂಗ್ ನ ಕೋಚ್ ನಾಗಶ್ರೀ ನಾಯ್ಕ, ಕಾನೂನು ಸಲಹೆಗಾರರಾದ ಮನೋಜ ನಾಯ್ಕ, ಅಲೆಯನ್ಸ್ ಮಾರ್ಷಲ್ ಆರ್ಟ್ಸ್ ನ ಕೋಚ್ ಇಸ್ಮಾಯಿಲ್, ರೇವೊಲ್ಯೂಷನ್ ಮಾರ್ಷಲ್ ಆರ್ಟ್ಸ್ ಅಕಾಡೆಮಿ ಕೋಚ್ ಜುಹೆಬ್, ಅಕ್ಫಾ ಅಕಾಡೆಮಿಯ ಕೋಚ್ ಅಮರ್ ಶಾಬಂದ್ರಿ ಅಭಿನಂದಿಸಿದ್ದಾರೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement