ಆರೋಪಿತ ಕೋವಿಡ್ ಹಗರಣ : ಸಿಎಂ ಸಿದ್ದರಾಮಯ್ಯಗೆ ತನಿಖಾ ಆಯೋಗದ ವರದಿ ಸಲ್ಲಿಕೆ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಆಪಾದಿತ ಕೋವಿಡ್ ಹಗರಣದ ತನಿಖಾ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶನಿವಾರ ಸಲ್ಲಿಸಲಾಗಿದೆ.
ಜಸ್ಟೀಸ್ ಜಾನ್ ಮೈಕೆಲ್ ಡಿ. ಕುನ್ಹಾ ಅವರ ನೇತೃತ್ವದ ತಂಡ ತಮ್ಮ ತನಿಖಾ ವರದಿಯನ್ನು ಶನಿವಾರ ರಾತ್ರಿ ಮುಖ್ಯಮಂತ್ರಿಗಳ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿತು.
‘ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ಹಾ ಅವರ ನೇತೃತ್ವದ ತನಿಖಾ ಆಯೋಗ ತನಿಖಾ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದ ಎಕ್ಸ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ಸೀಲ್‌ ಮಾಡಿರುವ ವರದಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈ ಸೇರಿದೆ. ಮುಖ್ಯಮಂತ್ರಿಗ‌ಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಈ ವೇಳೆ ಇದ್ದರು.
ಕೋವಿಡ್ 19 ಹಗರಣ: ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರೋಗ್ಯ ಸಚಿವರಾಗಿದ್ದ ಡಾ. ಕೆ.ಸುಧಾಕರ​​ ವಿರುದ್ಧ ಅಕ್ರಮ ನಡೆಸಿರುವ ಗಂಭೀರ ಆರೋಪ ಬಂದಿತ್ತು.

ವೆಂಟಿಲೇಟರ್‌, ಆಕ್ಸಿಜನ್ ಉಪಕರಣಗಳ ಖರೀದಿ, ನಿರ್ವಹಣೆ ಲೋಪ, ಕೊವಿಡ್-19 ನಿರ್ವಹಣಾ ಉಪಕರಣಗಳು, ರ‍್ಯಾಪಿಡ್‌ ಆ್ಯಂಟಿಜೆನ್ ಟೆಸ್ಟ್ ಕಿಟ್‌ಗಳ ಖರೀದಿ ಮತ್ತು ಸಂಗ್ರಹಣೆಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿಬಂದಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ಹಾ ಅವರ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಲಾಗಿತ್ತು. ಈಗ ತನಿಖಾ ಆಯೋಗ ತನ್ನ ವರದಿಯನ್ನು ಸಲ್ಲಿಸಿದೆ.

ಪ್ರಮುಖ ಸುದ್ದಿ :-   ಬಿಜೆಪಿ ಶಾಸಕ ಮುನಿರತ್ನ ಮತ್ತೆ ಬಂಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement