ಜೆಡಿಯು ಪಕ್ಷದ ವಕ್ತಾರ ಸ್ಥಾನಕ್ಕೆ ಕೆ.ಸಿ.ತ್ಯಾಗಿ ರಾಜೀನಾಮೆ

ಪಾಟ್ನಾ : ಹಿರಿಯ ಜನತಾ ದಳ (ಯುನೈಟೆಡ್) ನಾಯಕ ಕೆ.ಸಿ. ತ್ಯಾಗಿ ಅವರುವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಪಕ್ಷದ ವಕ್ತಾರ ಸ್ಥಾನಕ್ಕೆ ಭಾನುವಾರ ರಾಜೀನಾಮೆ ನೀಡಿದ್ದಾರೆ.
ಜೆಡಿಯು ತನ್ನ ಅಧ್ಯಕ್ಷ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಅವರು ರಾಜೀವ ರಂಜನ್ ಪ್ರಸಾದ ಅವರನ್ನು ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಿದ್ದಾರೆ ಎಂದು ಜೆಡಿಯು ಹೇಳಿಕೆಯಲ್ಲಿ ತಿಳಿಸಿದೆ. ಆದರೆ, ಇತ್ತೀಚೆಗೆ ವಿವಿಧ ವಿಷಯಗಳ ಕುರಿತು ಅವರು ನೀಡಿರುವ ಹೇಳಿಕೆಗಳಿಂದ ನಾಯಕತ್ವದ ಅಸಮಾಧಾನಗೊಂಡಿತ್ತು ಈ ಹಿನ್ನೆಲೆ ರಾಜೀನಾಮೆ ನೀಡಲಾಗಿದೆ ಎಂದು ಮೂಲಗಳು ಸೂಚಿಸಿವೆ.

ಕಳೆದ ಕೆಲವು ತಿಂಗಳುಗಳಿಂದ ನಾನು ಟಿವಿ ಚರ್ಚೆಗಳಿಂದ ದೂರವಿರುವುದನ್ನು ನೀವು ಗಮನಿಸಿರಬೇಕು. ಬೇರೆ ಕೆಲಸಗಳಿಂದಾಗಿ ನನಗೆ ವಕ್ತಾರ ಹುದ್ದೆಗೆ ನ್ಯಾಯ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ದಯವಿಟ್ಟು ನನ್ನನ್ನು ಈ ಜವಾಬ್ದಾರಿಯಿಂದ ಮುಕ್ತಗೊಳಿಸಿ. ನಿಮ್ಮ ಮತ್ತು ಬಿಹಾರ ಸರ್ಕಾರದ ಸಾಧನೆಗಳ ಬಗ್ಗೆ ಪ್ರಚಾರ ಮಾಡಲು ನಾನು ಲಭ್ಯವಿರುತ್ತೇನೆ ಎಂದು ಕೆ.ಸಿ. ತ್ಯಾಗಿ ಅವರು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಮಿತ್ರ ಪಕ್ಷವಾದ ಬಿಜೆಪಿಯೊಂದಿಗಿನ ತಮ್ಮ ಪಕ್ಷದ ಭಿನ್ನಾಭಿಪ್ರಾಯಗಳನ್ನು ಆಗಾಗ್ಗೆ ಎತ್ತಿ ತೋರಿಸುತ್ತಿದ್ದರು. ಏಕರೂಪ ನಾಗರಿಕ ಸಂಹಿತೆಯಾಗಲಿ, ವಕ್ಫ್ (ತಿದ್ದುಪಡಿ) ಮಸೂದೆಯಾಗಲಿ ಅಥವಾ ಪ್ಯಾಲೆಸ್ತೀನ್ ವಿಷಯದಲ್ಲಿ ಸರ್ಕಾರದ ನಿಲುವುಗಳಾಗಲಿ, ತ್ಯಾಗಿ ಅವರ ಬಹಿರಂಗ ಅಭಿಪ್ರಾಯಗಳು ಸೇರಿದಂತೆ ಅವರ ಇತ್ತೀಚಿನ ಹೇಳಿಕೆಗಳು ಪಕ್ಷದ ನಿಲುವಿಗಿಂತ ಭಿನ್ನವಾಗಿತ್ತು. ಇದು ಪಕ್ಷದೊಳಗಿನ ಹಲವರಿಗೆ ಹಿಡಿಸಲಿಲ್ಲ ಮತ್ತು ಬಿಜೆಪಿಗೆ ಮುಜುಗರ ಉಂಟು ಮಾಡಿತ್ತು ಎಂದು ವರದಿಯಾಗಿದೆ.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತದ ಕೊರತೆಯ ನಂತರ ಮೂರನೇ ಅವಧಿಗೆ ನರೇಂದ್ರ ಮೋದಿ ಸರ್ಕಾರವನ್ನು ಬೆಂಬಲಿಸಿದ ಪ್ರಮುಖ ಮಿತ್ರಪಕ್ಷಗಳಲ್ಲಿ ಜೆಡಿಯು ಸೇರಿದೆ. ಆಡಳಿತಾರೂಢ ಎನ್‌ಡಿಎ ಬಣದಲ್ಲಿ ಸಮನ್ವಯತೆ ಕಾಯ್ದುಕೊಳ್ಳುವಂತೆ ಬಿಜೆಪಿಯು ಮಿತ್ರಪಕ್ಷಗಳನ್ನು ಕೇಳಿಕೊಂಡಿದೆ ಎಂದು ತಿಳಿದುಬಂದಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ ಮುಜರಾಯಿ ದೇಗುಲಗಳಲ್ಲಿ ಪೂಜೆ, ಪ್ರಸಾದಕ್ಕೆ ʼನಂದಿನಿ ತುಪ್ಪʼದ ಬಳಕೆ ಕಡ್ಡಾಯ: ಸರ್ಕಾರ ಆದೇಶ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement