ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಹಗರಣಗಳ ಸಂಬಂಧ ಮುಡಾದ ಮಾಜಿ ಆಯುಕ್ತರು ಹಾಗೂ ಅಧಿಕಾರಗಳನ್ನ ತನಿಖೆಗೆ ಒಳಪಡಿಸಬೇಕು ಎಂದು ಕೋರಿ ಮೈಸೂರು ಕೆ.ಆರ್.ಕ್ಷೇತ್ರದ ಬಿಜೆಪಿ ಶಾಸಕ ಶ್ರೀವತ್ಸ ಅವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.
ಮುಡಾ ಆಯುಕ್ತರಾಗಿ ಈ ಹಿಂದೆ ಕೆಲಸ ಮಾಡಿದ ದಿನೇಶಕುಮಾರ, ನಟೇಶ ಹಾಗೂ ಭೂಸ್ವಾಧೀನಾಧಿಕಾರಿ, ನಗರ ಯೋಜನಾ ಅಧಿಕಾರಿ ಮತ್ತು ನಗರಾಭಿವೃದ್ಧಿ ಕಾರ್ಯದರ್ಶಿಯ ವಿರುದ್ಧ ತನಿಖೆ ನಡೆಸಬೇಕು ಎಂದು ಅವರು ಕರ್ನಾಟಕ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಮುಡಾದಲ್ಲಿ ನಡೆದ ಅಕ್ರಮಗಳಿಂದ ಸರ್ಕಾರಕ್ಕೆ 5 ಸಾವಿರ ಕೋಟಿ ರೂ. ನಷ್ಟವಾಗಿದೆ ಎಂಬ ವರದಿಗಳು ಬರುತ್ತಿದ್ದು, ಇದರ ಬಗ್ಗೆ ಸಂಪೂರ್ಣವಾಗಿ ತನಿಖೆ ನಡೆಸಬೇಕು. ಈ ಅಕ್ರಮದಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕೂಡಲೇ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಅವರನ್ನು ಬಂಧಿಸಿ ತನಿಖೆ ನಡೆಸಬೇಕು. ಹಾಗೂ ಈ ಅಕ್ರಮದಿಂದ ಸರ್ಕಾಕ್ಕೆ ನಷ್ಟ ಮಾಡಿದ ಅಧಿಕಾರಿಗಳಿಂದಲೇ ಹಣ ವಸೂಲಿ ಮಾಡಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ