ಬೆಂಗಳೂರು : ಸಹೋದರ ರಾಹುಲ್ ಖರ್ಗೆ ಅವರ ಸಿದ್ದಾರ್ಥ ವಿಹಾರ ಟ್ರಸ್ಟ್‌ಗೆ ತಮ್ಮ ಪ್ರಭಾವ ಬಳಸಿ ಸಚಿವ ಪ್ರಿಯಾಂಕ್ ಖರ್ಗೆಯವರು ಕೆಐಎಡಿಬಿಯಿಂದ ಸಿಎ ನಿವೇಶನ ಮಂಜೂರು ಮಾಡಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವಿವರಣೆ ನೀಡುವಂತೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬಸ್ಥರು ಟ್ರಸ್ಟಿಗಳಾಗಿರುವ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ನಿಯಮ ಉಲ್ಲಂಘನೆಯ ಜೊತೆಗೆ ತರಾತುರಿಯಲ್ಲಿ ಕೆಐಎಡಿಬಿಯಿಂದ ಐದು ಎಕರೆ ಸಿಎ ನಿವೇಶನ ಮಂಜೂರು ಮಾಡಲಾಗಿದೆ. ಬೆಂಗಳೂರಿನ ಏರೋಸ್ಪೇಸ್ ಪಾರ್ಕ್‌ನಲ್ಲಿ ಚಿವ ಪ್ರಿಯಾಂಕ್ ಖರ್ಗೆ ತಮ್ಮ ಪ್ರಭಾವ ಬಳಸಿ 5 ಎಕರೆ ನಿವೇಶನ ಮಂಜೂರು ಮಾಡಿಸಿದ್ದಾರೆ. ಪ್ರಿಯಾಂಕ್ ಖರ್ಗೆ ಸಚಿವರಾಗಿದ್ದುಕೊಂಡು ಈ ರೀತಿ ಸರ್ಕಾರಿ ಸೌಲಭ್ಯ ಪಡೆದಿರುವುದು ಸರಿಯೇ ಎಂದು ವಿಧಾನ ಪರಿಷತ್ ವಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ರಾಜ್ಯಪಾಲರಿಗೆ ದೂರು ನೀಡಿದ್ದರು
ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಯಿಂದ ವಿವರಣೆ ಕೇಳಿರುವ ಕುರಿತು ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ನಮ್ಮ ಪ್ರಕರಣದಲ್ಲೂ ರಾಜ್ಯಪಾಲರು ವಿವರಣೆ ಕೇಳಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ ಎಂದು ತಿಳಿಸಿದರು. “ರಾಜ್ಯಪಾಲರಿಗೆ ಎರಡು ಸಂವಿಧಾನ ಇದೆ. ಬಿಜೆಪಿ, ಜೆಡಿಎಸ್ದು ಒಂದು ಸಂವಿಧಾನ, ಕಾಂಗ್ರೆಸ್ಸಿಗೆ ಒಂದು ಸಂವಿಧಾನ ಎಂದು ವಾಗ್ದಾಳಿ ನಡೆಸಿದ್ದಾರೆ.
“
ನಿಮ್ಮ ಕಾಮೆಂಟ್ ಬರೆಯಿರಿ