ಮುಡಾ ಹಗರಣದಲ್ಲಿ ಮೊದಲ ತಲೆದಂಡ ; ಮುಡಾದ ಹಿಂದಿನ ಆಯುಕ್ತ ಸಸ್ಪೆಂಡ್‌…

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿರುವ ಮುಡಾ ಹಗರಣದಲ್ಲಿ (Muda Scam) ಮೊದಲ ತಲೆದಂಡವಾಗಿದೆ. ರಾಜ್ಯಪಾಲರ ಆದೇಶಾನುಸಾರ ಹಿಂದಿನ ಆಯುಕ್ತ ಜಿಟಿ ದಿನೇಶಕುಮಾರ (GT Dinesh Kumar) ಅವರನ್ನು ಸರ್ಕಾರ ಅಮಾನತು ಮಾಡಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸೈಟ್​ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲರಾದ ಥಾವರಚಂದ್‌ ಗೆಹ್ಲೋಟ ಅನುಮತಿ ನೀಡಿದ್ದು, ಇದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಅದರ ವಿಚಾರಣೆ ನಡೆಯುತ್ತಿದೆ. ಏತನ್ಮಧ್ಯೆ ಈಗ ಈ ಹಗರಣದಲ್ಲಿ ಮೊದಲ ತಲೆದಂಡವಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಹಿಂದಿನ ಆಯುಕ್ತರಾಗಿದ್ದ ಹಾಗೂ ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ನೇಮಕವಾಗಿದ್ದ ಜಿ.ಟಿ ದಿನೇಶಕುಮಾರ ಅವರನ್ನು ಅಮಾನತು ಮಾಡಲಾಗಿದೆ.

ಮುಡಾ ಹಗರಣದ ಆರೋಪದ ಮಧಯೆ ಆಯುಕ್ತರಾಗಿದ್ದ ದಿನೇಶಕುಮಾರ​ ಅವರನ್ನು ನಂತರ ರಾಜ್ಯ ಸರ್ಕಾರ ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ನೇಮಕ ಮಾಡಿ ವರ್ಗಾಯಿಸಿತ್ತು. ಅವರ ವಿರುದ್ಧ ತನಿಖೆ ನಡೆಯುತ್ತಿದ್ದರೂ ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರನ್ನಾಗಿ ನೇಮಕ ಮಾಡಿರುವ ರಾಜ್ಯ ಸರಕಾರದ ಕ್ರಮದ ವಿರುದ್ಧ ವಿಪಕ್ಷಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದವು. ಅಲ್ಲದೆ ಅವರ ನೇಮಕ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದವು. ಅವರ ವಿರುದ್ಧ ಆರೋಪ ಕೇಳಿ ಬಂದಾಗಲೂ ಈ ರೀತಿ ನೇಮಕ ಮಾಡಿದ್ದೇಕೆ ಎಂದು ಬಿಜೆಪಿ ಪ್ರಶ್ನಿಸಿತ್ತು. ಈಗ ರಾಜ್ಯಪಾಲರ ಆದೇಶಾನುಸಾರ ಮುಡಾದಿಂದ ಹಾವೇರಿ ವಿವಿ ಕುಲಸಚಿವರಾಗಿದ್ದ ದಿನೇಶಕುಮಾರ ಅವರನ್ನು ಅಮಾನತುಗೊಳಿಸಿ ಅಧೀನ ಕಾರ್ಯದರ್ಶಿ ಉಮಾದೇವಿ ಆದೇಶ ಹೊರಡಿಸಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕದ ಮುಜರಾಯಿ ದೇಗುಲಗಳಲ್ಲಿ ಪೂಜೆ, ಪ್ರಸಾದಕ್ಕೆ ʼನಂದಿನಿ ತುಪ್ಪʼದ ಬಳಕೆ ಕಡ್ಡಾಯ: ಸರ್ಕಾರ ಆದೇಶ

ಲಕ್ಷ್ಮಿಪುರಂ ಠಾಣೆಯಲ್ಲಿ ದೂರು
ಮುಡಾ ಮಾಜಿ ಆಯುಕ್ತರಾಗಿದ್ದ ಡಿ.ಬಿ.ನಟೇಶ ಹಾಗೂ ಜಿ.ಟಿ.ದಿನೇಶಕುಮಾರ ಸರ್ಕಾರಕ್ಕೆ 5 ಸಾವಿರ ಕೋಟಿ ರೂಪಾಯಿ ನಷ್ಟ ಉಂಟು ಮಾಡಿದ್ದಾರೆ. ಇವರಿಬ್ಬರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ವಕೀಲ ಅರುಣಕುಮಾರ ಎಂಬವರು ಮೈಸೂರಿನ ಲಕ್ಷ್ಮಿಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement