ಬೆಂಗಳೂರು : ಶಿಕ್ಷಣ ಇಲಾಖೆಯಿಂದ ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಯನ್ನು ಪ್ರಕಟ ಮಾಡಲಾಗಿದೆ. ಪ್ರಾಥಮಿಕ ಶಾಲೆಯ ವಿಭಾಗದಲ್ಲಿ 20 ಹಾಗೂ ಪ್ರೌಢ ಶಾಲಾ ವಿಭಾಗದಲ್ಲಿ 11 ಶಿಕ್ಷಕರನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ. ಸೆಪ್ಟೆಂಬರ್ 5ರಂದು ಶಿಕ್ಷಕರ ದಿನಾಚರಣೆ ದಿನ ಸರ್ಕಾರ ಈ ಪ್ರಶಸ್ತಿ ಪ್ರದಾನ ಮಾಡಲಿದೆ. ಜೊತೆಗೆ ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆಯಾದ ಮಹಿಳಾ ಶಿಕ್ಷಕಿಯರಿಗೆ ಅಂದೇ ಸಾವಿತ್ರಿಬಾಯಿ ಪುಲೆ ಪ್ರಶಸ್ತಿಯನ್ನು ನೀಡಲಾಗುತ್ತದೆ.
ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರು, ಮುಖ್ಯ ಶಿಕ್ಷಕರು, ವಿಶೇಷ ಶಿಕ್ಷಕರುಗಳಿಗೆ ಸರ್ಕಾರದ ಆದೇಶ ಸಂಖ್ಯೆ: ಇಪಿ 308 ಪಿಬಿಎಸ್ 2021, ದಿನಾಂಕ: 12.09.2022 ರ ಅನುಸಾರ ತಲಾ 25,000 ರೂ.ಗಳಂತೆ ನೀಡಲಾಗುತ್ತದೆ. ನಗದು ಪುರಸ್ಕಾರ ನೀಡಲು ಹಾಗೂ ಇದರ ವೆಚ್ಚವನ್ನು ಬೆಂಗಳೂರಿನ ರಾಜ್ಯ ಶಿಕ್ಷಣ ಕಲ್ಯಾಣ ನಿಧಿ ಮತ್ತು ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿಯಿಂದ ಭರಿಸಲು ಅನುಮತಿ ನೀಡಿ ಆದೇಶಿಸಿದೆ.
ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪುರಸ್ಕೃತರ ಪಟ್ಟಿ ಇಲ್ಲಿದೆ.
ನಿಮ್ಮ ಕಾಮೆಂಟ್ ಬರೆಯಿರಿ