ಧಾರವಾಡ : ಕೆಲವು ದಿನಗಳ ಹಿಂದೆ ಅವಕಾಶ ಸಿಕ್ಕರೆ ನಾನು ಕೂಡ ಮುಖ್ಯಮಂತ್ರಿಯಾಗುತ್ತೇನೆ ಎಂದು ಹೇಳಿಕೆ ನೀಡಿದ್ದ ಹಿರಿಯ ಕಾಂಗ್ರೆಸ್ ಮುಖಂಡ ಆರ್.ವಿ.ದೇಶಪಾಂಡೆ ಈಗ ಕಾಂಗ್ರೆಸ್ ಸರ್ಕಾರದ ಐದು ವರ್ಷಗಳ ಅವಧಿ ಮುಗಿಯುವವರೆಗೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ಹೇಳಿದ್ದಾರೆ.
ಧಾರವಾಡದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಉತ್ತಮ ಕೆಲಸ ಮಾಡುತ್ತಿದ್ದು, ಮುಂದುವರಿಯಲಿದ್ದಾರೆ. ಅವರಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಕೂಡ ಕೆಪಿಸಿಸಿ ಅಧ್ಯಕ್ಷರಾಗಿ ನಾಯಕರಿಗೆ ಕಾರ್ಯಕರ್ತರಿಗೆ ಚುರುಕು ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ. ನಾನಂತೂ ಮುಖ್ಯಮಂತ್ರಿ ರೇಸಲ್ಲಿ ಇಲ್ಲವೇ ಇಲ್ಲ ಎಂದರು.
ನಾನು ಐವತ್ತು ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ನನ್ನ ತಲೆ ರಾಜಕೀಯದಲ್ಲೆ ಬೆಳ್ಳಗಾಗಿದೆ. ಮಾಧ್ಯಮಗಳು ಮತ್ತು ಪತ್ರಕರ್ತರು ನನ್ನನ್ನು ಎಷ್ಟೇ ಪ್ರಚೋದಿಸಿದರೂ ನಾನು ತಾಳ್ಮೆ ಕಳೆದುಕೊಳ್ಳುವುದಿಲ್ಲ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿರಲಿದ್ದಾರೆ, ಆಸೆ ಇರುವುದು ತಪ್ಪಲ್ಲ, ಆದರೆ ದುರಾಸೆ ಇರಬಾರದು. ನನಗೆ ಆಸೆಯೂ ಇಲ್ಲ, ದುರಾಸೆಯೂ ಇಲ್ಲ ಎಂದು ದೇಶಪಾಂಡೆ ಹೇಳಿದರು.
ಜಾರಕಿಹೊಳಿ ಅವರ ದೆಹಲಿ ಭೇಟಿ ಕುರಿತು ಪ್ರತಿಕ್ರಿಯಿಸಿದ ಅವರು, ಇದಕ್ಕೆ ವಿಶೇಷ ಅರ್ಥ ಕಲ್ಲಿಸುವ ಅಗತ್ಯವಿಲ್ಲ. “ಸಚಿವ ಸತೀಶ್ ಜಾರಕಿಹೊಳಿ ಓರ್ವ ಜವಾಬ್ದಾರಿಯುತ ಸಚಿವರು, ಅವರು ತಮ್ಮ ಇಲಾಖೆ ಸಂಬಂಧ ಗಡ್ಕರಿ ಅವರ ಭೇಟಿಗಾಗಿ ಹೋಗುತ್ತಾರೆ ಎಂದು ತಿಳಿಸಿದರು.
ನಿಮ್ಮ ಕಾಮೆಂಟ್ ಬರೆಯಿರಿ