ಬಿಜೆಪಿ ಶಾಸಕ ಸುರೇಶಕುಮಾರ ಆಸ್ಪತ್ರೆಗೆ ದಾಖಲು

ಬೆಂಗಳೂರು : ತೀವ್ರ ಜ್ವರದಿಂದ ಬಳಲುತ್ತಿರುವ ಬಿಜೆಪಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಎಸ್. ಸುರೇಶಕುಮಾರ ಅವರು ಆಸ್ಪತ್ರೆಗೆ ದಾಖಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು ಶೇಷಾದ್ರಿಪುರಂನ ಖಾಸಗಿ ಆಸ್ಪತ್ರೆಗೆ ಸುರೇಶಕುಮಾರ ಅವರನ್ನು ದಾಖಲಿಸಲಾಗಿದೆ. ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.
ಕಳೆದ ತಿಂಗಳು ಬೆಂಗಳೂರಿನಿಂದ ತಿರುಪತಿಗೆ ಸೈಕಲ್ ಪ್ರಯಾಣ ಬೆಳೆಸಿದ್ದ ಸುರೇಶಕುಮಾರ ಬಳಿಕ ದೋಸ್ತಿ ಪಾದಯಾತ್ರೆಯಲ್ಲೂ ಒಂದು ದಿನ ಭಾಗಿಯಾಗಿದ್ದರು. ಆದರೆ ಇದೀಗ ಕಳೆದ 3-4 ದಿನಗಳ ಹಿಂದೆ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದರು.
ಮಂಗಳವಾರ ಜ್ವರ ತೀವ್ರಗೊಂಡ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ಐಸಿಯು ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಈ ಬಾರಿ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ ಹಿರಿಯ ಸಾಹಿತಿ ಹಂ.ಪ. ನಾಗರಾಜಯ್ಯ

ನಿಮ್ಮ ಕಾಮೆಂಟ್ ಬರೆಯಿರಿ

advertisement