ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್ ಗ್ಯಾಂಗ್ ವಿರುದ್ಧ ಕೋರ್ಟ್​ಗೆ ದೋಷಾರೋಪ ಪಟ್ಟಿ ಸಲ್ಲಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಮತ್ತು ಅವರ ಗ್ಯಾಂಗ್ ವಿರುದ್ಧ 3,991 ಪುಟಗಳ ದೋಷಾರೋಪ ಪಟ್ಟಿಯನ್ನು ಪೊಲೀಸರು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್‌ಗೆ ಬುಧವಾರ ಸಲ್ಲಿಸಿದ್ದಾರೆ.
ಈ ದೋಷಾರೋಪಣಾ ಪಟ್ಟಿಯಲ್ಲಿ ಒಟ್ಟು 231 ಸಾಕ್ಷಿಗಳನ್ನು ನಮೂದಿಸಲಾಗಿದೆ. ಒಟ್ಟು 3,991 ಪುಟ ಇರುವ ಈ ಆರೋಪ ಪಟ್ಟಿಯಲ್ಲಿ ಒಟ್ಟು 7 ಸಂಪುಟಗಳಿವೆ. 10 ಕಡತಗಳನ್ನು ಒಳಗೊಂಡಿದೆ.
ಕಾಮಾಕ್ಷಿಪಾಳ್ಯ ಇನ್‌ಸ್ಪೆಕ್ಟರ್‌, ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖಾಧಿಕಾರಿ ಎಸಿಪಿ ಚಂದನಕುಮಾರ ನೇತೃತ್ವದಲ್ಲಿ ಕೋರ್ಟ್‌ಗೆ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿದೆ.

ದೋಷಾರೋಪ ಪಟ್ಟಿಯಲ್ಲಿ ದರ್ಶನ್ ಅವರನ್ನು 2ನೇ ಆರೋಪಿ ಎಂದೇ ದಾಖಲಿಸಲಾಗಿದ್ದು, ಪವಿತ್ರಾ 1ನೇ ಆರೋಪಿಯಾಗಿದ್ದಾರೆಂದು ಉಲ್ಲೇಖಿಸಲಾಗಿದೆ, 17 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಆಗಿದ್ದು, 3 ಪ್ರತ್ಯಕ್ಷ ಸಾಕ್ಷಿಗಳು, ಎಫ್​ಎಸ್​ಎಲ್​ ಮತ್ತು ಸಿಎಫ್​ಎಸ್​ಎಲ್​ನಿಂದ 8 ವರದಿಗಳಿರುವುದು, ಈ ಪ್ರಕರಣದಲ್ಲಿ ಒಟ್ಟು 231 ಸಾಕ್ಷಿಗಳಿರುವುದಾಗಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ಪ್ರಕರಣ ತನಿಖೆ ಪೂರ್ಣಗೊಂಡಿಲ್ಲದಿರುವುದರಿಂದ ಸಿಆರ್​ಪಿಸಿ 173(8) ಅಡಿಯಲ್ಲಿ ಪ್ರಿಲಿಮಿನರಿ ಚಾರ್ಜ್​ಶೀಟ್ ಸಲ್ಲಿಕೆ ಮಾಡಲಾಗಿದೆ. ಅಪಹರಣ ಮಾಡಿಸಿದ್ದು, ಹಲ್ಲೆ ಮಾಡಿದ್ದು, ಕೊಲೆ ನಂತರ ಮುಚ್ಚಿಹಾಕಲು ಹಣ ನೀಡಿದ್ದು ದರ್ಶನ್ ಎಂಬುದನ್ನು ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ. ದರ್ಶನ್ ಬಟ್ಟೆ ಮತ್ತು ಶೂನಲ್ಲಿ ರೇಣುಕಾಸ್ವಾಮಿ ಅವರ ರಕ್ತ ಇರುವುದು ದೃಢಪಟ್ಟಿದೆ. ಕೊಲೆ ಮಾಡಲು ಮೂಲ ಕಾರಣ ಪವಿತ್ರಾ ಗೌಡ. ಹೀಗಾಗಿ, ಅವರು ಎ1 ಆರೋಪಿಯಾಗಿದ್ದಾರೆ. ಹಲ್ಲೆ ನಡೆಯುವ ಸ್ಥಳದಲ್ಲಿ ಅವರು ಹಾಜರಿದ್ದರು. ಚಪ್ಪಲಿಯಲ್ಲಿ ಅವರು ಹೊಡೆದಿದ್ದಾರೆ. ಕೃತ್ಯ ನಡೆದ ಸಮಯದಲ್ಲಿ ಪವಿತ್ರ ಗೌಡ ಅಲ್ಲೇ ಇರುವುದಕ್ಕೆ ಸಾಕ್ಷಿ ದೊರೆತಿದೆ ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ಪ್ರಮುಖ ಸುದ್ದಿ :-   ಕೃಷ್ಣಾ ನದಿಯಲ್ಲಿ ಮುಳುಗಿಸಿ ವ್ಯಕ್ತಿ ಕೊಲೆ ಪ್ರಕರಣವನ್ನು 1 ವರ್ಷದ ನಂತರ ಭೇದಿಸಿದ ಪೊಲೀಸರು : ಪತ್ನಿ ಸೇರಿ ಮೂವರು ಅರೆಸ್ಟ್‌

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement