ಕರ್ನಾಟಕದಲ್ಲಿ 4 ದಿನ ಭಾರಿ ಮಳೆ ಮುನ್ಸೂಚನೆ : 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ದುರ್ಬಲವಾಗಿದ್ದ ಮುಂಗಾರು ಮಳೆ ಮತ್ತೆ ಪ್ರಬಲವಾಗಿದೆ. ಹೀಗಾಗಿ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ 11 ಜಿಲ್ಲೆಗಳಿಗೆ ಯೆಲ್ಲೋ ಅರ್ಲಟ್​ ಘೋಷಣೆ ಮಾಡಲಾಗಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗದಲ್ಲಿ ಸೆಪ್ಟೆಂಬರ್ 5 ರಿಂದ 8ರ ವರೆಗೆ ಭಾರಿ ಮಳೆ ಬೀಳುವ ಸಾಧ್ಯತೆ ಇದ್ದು, ಯೆಲ್ಲೋ ಅರ್ಲಟ್​ ಘೋಷಣೆ ಮಾಡಲಾಗಿದೆ. ಬೆಳಗಾವಿ, ಬೀದರ​, ಕಲಬುರಗಿ, ಯಾದಗಿರಿಯಲ್ಲಿ ಸೆಪ್ಟೆಂಬರ್‌ ೬ರಂದು ಯೆಲ್ಲೋ ಅರ್ಲಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ,ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement