ಪ್ಯಾರಿಸ್ : ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ ಒಂಬತ್ತನೇ ದಿನ ಪುರುಷರ ಹೈಜಂಪ್-ಟಿ64 ಸ್ಪರ್ಧೆಯಲ್ಲಿ ಭಾರತದ ಪ್ರವೀಣಕುಮಾರ ಚಿನ್ನದ ಪದಕ ಗೆದ್ದಿದ್ದಾರೆ.
ಪ್ರವೀಣಕುಮಾರ ಚಿನ್ನದ ಪದಕ ಗೆದ್ದರೆ, ಅಮೆರಿಕದ ಡೆರೆಕ್ ಲೊಸಿಡೆಂಟ್ ಬೆಳ್ಳಿಯ ಪದಕ ಗೆದ್ದಿದ್ದಾರೆ. ಉಜ್ಬೇಕಿಸ್ತಾನ್‌ನ ತೈಮುರ್‌ಬೆಕ್ ಗಿಯಾಜೊವ್ ಮತ್ತು ಪೋಲೆಂಡ್‌ನ ಮಸಿಯೆಜ್ ಲೆಪಿಯಾಟೊ ಜಂಟಿಯಾಗಿ ಕಂಚಿನ ಪದಕ ಪಡೆದುಕೊಂಡಿದ್ದಾರೆ.ಪ್ರವೀಣಕುಮಾರ ಅವರು 2.08 ಮೀಟರ್ ಎತ್ತರ ಜಿಗಿಯುವ ಮೂಲಕ ಚಿನ್ನದ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಈ ಚಿನ್ನದ ಸಾಧನೆಯೊಂದಿಗೆ ಪ್ಯಾರಾ ಅಥ್ಲೀಟ್ ಪ್ರವೀಣಕುಮಾರ ಅವರು, ಪ್ಯಾರಾಲಿಂಪಿಕ್ಸ್‌ನ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಮರಿಯಪ್ಪನ್ ತಂಗವೇಲು ನಂತರ ಚಿನ್ನದ ಪದಕ ಗೆದ್ದ ಎರಡನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಲ್ಲದೆ ಪ್ಯಾರಾಲಿಂಪಿಕ್ಸ್ ನಲ್ಲಿ ಸತತ 2ನೇ ಬಾರಿಗೆ ಪದಕ ಗೆದ್ದಿರುವ ಹೆಗ್ಗಳಿಕೆ ಪ್ರವೀಣ್ ಪಾತ್ರರಾಗಿದ್ದಾರೆ. ಕಳೆದ ಬಾರಿ ಅಂದರೆ 2020 ರ ಟೋಕಿಯೊ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದಿದ್ದ ಪ್ರವೀಣಕುಮಾರ, ಈ ಬಾರಿ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ. ಇದು ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ದೊರೆತ 26 ನೇ ಪದಕ ಹಾಗೂ 6ನೇ ಚಿನ್ನದ ಪದಕವಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ