ಮಂಗಳೂರು : ನವ ದಂಪತಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿ ನವವಿವಾಹಿತೆ ಮೃತಪಟ್ಟಿದ್ದು, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಬಂಟ್ವಾಳದ ತಲಪಾಡಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸಂಭವಿಸಿದೆ ಎಂದು ವರದಿಯಾಗಿದೆ.
ಇವರು ಎರಡು ದಿನಗಳ ಹಿಂದಷ್ಟೇ ವಿವಾಹವಾಗಿದ್ದರು ಎಂದು ಹೇಳಲಾಗಿದೆ. ಮೃತ ನವವಿವಾಹಿತೆಯನ್ನು ಮಾನಸ ಎಂದು ಗುರುತಿಸಲಾಗಿದೆ. ಪತಿ, ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನೀಶಕೃಷ್ಣ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿಸಿ ರೋಡಿನ ಕಡೆಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ನದಂಪತಿ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆ ಡಿವೈಡರ್ ಮೇಲಿನಿಂದ ಇನ್ನೊಂದು ಬದಿಗೆ ಹಾರಿ ಮಂಗಳೂರು ಕಡೆಯಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್‌ಟಿ.ಸಿ ಬಸ್ ಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಮಾನಸ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಹಾಗೂ ಅನೀಶಕೃಷ್ಣ ಅವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ.
ಸೆಪ್ಟಂಬರ್ 5 ರಂದು ದೇಂತಡ್ಕ ದೇವಸ್ಥಾನದಲ್ಲಿ ಇವರಿಬ್ಬರ ವಿವಾಹ ನಡೆದಿತ್ತು. ಮದುವೆ ಕಾರ್ಯಕ್ರಮದ ವಿಚಾರವಾಗಿ ಅವರು ಅಲ್ಲಿನ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ಬಂದು ವಾಪಸ್ ಮಾವನ ಮನೆಗೆ ಹೋಗುವಾಗ ಈ ಅವಘಡ ನಡೆದಿದೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ