ಹರಿಯಾಣ ವಿಧಾನಸಭೆ ಚುನಾವಣೆ; ಕುಸ್ತಿಪಟು ವಿನೇಶ್‌ ಫೋಗಟ್‌ ಗೆ ಕಾಂಗ್ರೆಸ್‌ ಟಿಕೆಟ್‌

ಚಂಡೀಗಢ : ಜುಲಾನಾದಿಂದ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಒಲಿಂಪಿಯನ್‌ ಕುಸ್ತಿಪಟು ವಿನೇಶ್ ಫೋಗಟ್‌ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಅವರು ಜುಲಾನ್‌ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ.
ಇದು ತೂಕದ ಕಾರಣಕ್ಕೆ ಒಲಿಂಪಿಕ್ ನಿಂದ ಅನರ್ಹತೆಗೊಂಡ ನಂತರ ಪ್ರಸಿದ್ಧ ಕುಸ್ತಿಪಟುವಿನ ಜೀವನದಲ್ಲಿ ಹೊಸ ಆರಂಭವನ್ನು ಗುರುತಿಸಿದೆ.
ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಗರ್ಹಿ ಸಂಪ್ಲಾ-ಕಿಲೋಯ್ ಕ್ಷೇತ್ರ, ಮತ್ತು ರಾಜ್ಯ ಘಟಕದ ಮುಖ್ಯಸ್ಥ ಉದಯ್ ಭಾನ್ ಹೊಡಾಲ್‌ನಿಂದ ಸ್ಪರ್ಧಿಸಲಿದ್ದಾರೆ ಎಂದು ಪಕ್ಷವು ತಿಳಿಸಿದ್ದು, ಚುನಾವಣೆಗೆ 31 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಕುಸ್ತಿಪಟುಗಳಾದ ವಿನೇಶ್‌ ಫೋಗಟ್‌, ಬಜರಂಗ್‌ ಪುನಿಯಾ ಶುಕ್ರವಾರ ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗಿದ್ದರು.ಇದರ ಬೆನ್ನಲ್ಲೇ ವಿನೇಶ್‌ ಫೋಗಟ್‌ಗೆ ಸ್ಪರ್ಧಿಸಲು ಕಾಂಗ್ರೆಸ್‌ ಟಿಕೆಟ್‌ ನೀಡಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ನೀಟ್ ಅಣಕು ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ 17 ವರ್ಷದ ಮಗಳನ್ನು ಹೊಡೆದು ಕೊಂದ ಶಿಕ್ಷಕ...!

ನಿಮ್ಮ ಕಾಮೆಂಟ್ ಬರೆಯಿರಿ

advertisement