ಮಧುಗಿರಿ | ಎರಡು ಕಾರುಗಳ ನಡುವೆ ಡಿಕ್ಕಿ : ಐವರು ಸಾವು

ತುಮಕೂರು: ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಐವರು ಮೃತಪಟ್ಟ ಘಟನೆ ತುಮಕೂರಿನ ಮಧುಗಿರಿ ತಾಲೂಕಿನ ಕೆರೆಗಳಪಾಳ್ಯದ ಬಳಿ ಭಾನುವಾರ ರಾತ್ರಿ 7ರ ಸುಮಾರಿಗೆ ನಡೆದಿದೆ ಎಂದು ವರದಿಯಾಗಿದೆ.
ಒಂದು ಕಾರಿನಲ್ಲಿದ್ದ ನಾಲ್ವರು ಹಾಗೂ ಮತ್ತೊಂದು ಕಾರಿನಲ್ಲಿ ಓರ್ವ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಮೃತರನ್ನು ಪಾವಗಡ ತಾಲೂಕಿನ ಎತ್ತಿನಹಳ್ಳಿ ಗ್ರಾಮದ ಒಂದೇ ಕುಟುಂಬದ ನಾಲ್ವರು ಸಾವಿಗೀಡಾಗಿದ್ದಾರೆ. ಟಿಯಾಗೊ ಕಾರಿನಲ್ಲಿ ಓರ್ವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಸಿಯಾಜ್ ಮಾರುತಿ ಕಾರು ಹಾಗೂ ಟಾಟಾ ಟಿಯಾಗೋ ಕಾರು ನಡುವೆ ಕೆರೆಗಳಪಾಳ್ಯ ಹಾಗೂ ಕಾಟಗಾನಹಟ್ಟಿ ಬಳಿ ಅಪಘಾತ ಸಂಭವಿಸಿದೆ. ಸಿಯಾಜ್ ಮಾರುತಿ ಕಾರಿನಲ್ಲಿದ್ದ ಕುಟುಂಬ ವೈ‌.ಎನ್. ಹೊಸಕೋಟೆ ಕಡೆಯಿಂದ ಬೆಂಗಳೂರಿಗೆ ಹೊರಟಿತ್ತು. ಕಾಟಗಾನಹಟ್ಟಿ ಹಾಗೂ ಕೆರೆಗಳಪಾಳ್ಯ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ದುರ್ಘಟನೆ ಸಂಭವಿಸಿದೆ.
ಡಿಕ್ಕಿಯಾದ ರಭಸಕ್ಕೆ ಎರಡು ಕಾರುಗಳು ಸಂಪೂರ್ಣ ಜಖಂಗೊಂಡಿವೆ. ಟಿಯಾಗೋ ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ತುಮಕೂರು ಎಸ್​ಪಿ ಅಶೋಕ್ ಕೆ.ವಿ ಹಾಗೂ ಮಧುಗಿರಿ ಪಿಎಸ್​ಐ ವಿಜಯ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೀಡಾದ ಕಾರುಗಳ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿ :-   ಭಾರಿ ಮಳೆ ; ಉತ್ತರ ಕನ್ನಡ ಜಿಲ್ಲೆಯ 4 ತಾಲೂಕುಗಳ ಶಾಲೆಗಳಿಗೆ ಇಂದು (ಜೂ.25) ರಜೆ ಘೋಷಣೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement