ಗ್ರೂಪ್-ಬಿ, ಗ್ರೂಪ್-ಸಿ ಹುದ್ದೆಗಳಿಗೆ ನೇಮಕಾತಿ ; ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ ಸರ್ಕಾರ

ಬೆಂಗಳೂರು: ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಸಿ ಮತ್ತು ಗ್ರೂಪ್-ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಅನ್ವಯಿಸುವಂತೆ 3 ವರ್ಷಗಳ ಸಡಿಲಿಕೆ ಮಾಡಲಾಗಿದೆ.
ರಾಜ್ಯದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ಮತ್ತು ಇತರೆ ಕಾರಣದಿಂದ ಮತ್ತು ಪದೇ ಪದೇ ಲಾಕ್ ಡೌನ್ ಆಗಿದ್ದರಿಂದ ವಿವಿಧ ಇಲಾಖೆಯಲ್ಲಿನ ಖಾಲಿ ಹುದ್ದೆಗಳ ನೇಮಕಾತಿಯನ್ನು ಸರ್ಕಾರವು ಮುಂದೂಡುತ್ತಾ ಬಂದಿದೆ. ಹೀಗಾಗಿ ಅಭ್ಯರ್ಥಿಗಳ ವಯಸ್ಸು ಮೀರುತ್ತಿದ್ದು, ಅನೇಕ ಅಭ್ಯರ್ಥಿಗಳು ವಿವಿಧ ಹುದ್ದೆಗಳ ನೇಮಕಾತಿಯಿಂದ ವಂಚಿತರಾಗುತ್ತಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರದ ನೇರ ನೇಮಕಾತಿಯಲ್ಲಿ ಪ್ರಸ್ತುತ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಸಡಿಲಿಸುವಂತೆ ಕೋರಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಬಿ ಮತ್ತು ಗ್ರೂಪ್-ಸಿ ಮತ್ತು ಗ್ರೂಪ್-ಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಯೋಮಿತಿ ಸಡಿಲಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.

ಗರಿಷ್ಠ ವಯೋಮಿತಿಯನ್ನು ಹೆಚ್ಚಿಸುವ ಕುರಿತು ಸ್ವೀಕರಿಸಲಾಗಿರುವ ಮನವಿಗಳನ್ನು ಪರಿಶೀಲಿಸಿದ ನಂತರ ರಾಜ್ಯ ಸಿವಿಲ್ ಸೇವೆಗಳಿಗೆ ಮಾಡುವ ನೇರ ನೇಮಕಾತಿಯಲ್ಲಿ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯನ್ನು ಒಂದು ಬಾರಿಗೆ ಮಾತ್ರ ನೀಡಲು ತೀರ್ಮಾನಿಸಲಾಗಿದ್ದು, ಅದರಂತೆ ವಯೋಮಿತಿ ಸಡಿಲಿಕೆ ಮಾಡಿ ಆದೇಶಿಸಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್-ಬಿ ಮತ್ತು ಗ್ರೂಪ್-ಸಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಹಾಗೂ ಮುಂದಿನ ಒಂದು ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ(One time measure) ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆ ಮಾಡಿ ಆದೇಶಿಸಿದೆ.

ಪ್ರಮುಖ ಸುದ್ದಿ :-   ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಜಾಮೀನು ನಿರಾಕರಿಸಿದ ನ್ಯಾಯಾಲಯ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement