ಬೆಂಗಳೂರು :ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳ ಮತ್ತು ಇತರ ಹಗರಣಗಳ ತನಿಖೆಯ ಪ್ರಗತಿ ಪರಿಶೀಲನೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.
ಸರ್ಕಾರದ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿ ಚಾಲ್ತಿಯಲ್ಲಿರುವ ವಿವಿಧ ಹಗರಣಗಳ ತನಿಖೆಗಳ ಪ್ರಗತಿ, ಸಮನ್ವಯ ಮುಂತಾದವುಗಳಿಗೆ ಸಂಬಂಧಿಸಿದಂತೆ ಕ್ರಮ ವಹಿಸಲು ಗೃಹ ಸಚಿವರಾದ ಡಾ.ಜಿ. ಪರಮೇಶ್ವರ ನೇತೃತ್ವದಲ್ಲಿ ಎಚ್.ಕೆ ಪಾಟೀಲ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ ಮತ್ತು ಸಂತೋಷ್ ಲಾಡ್ ಅವರನ್ನೊಳಗೊಂಡ ಸಮಿತಿಯನ್ನು ರಚಿಸಿಸಲಾಗಿದೆ. ಈ ಸಮಿತಿಯು ಮುಂದಿನ ಎರಡು ತಿಂಗಳಲ್ಲಿ ತನಗೆ ವಹಿಸಿರುವ ಜವಾಬ್ದಾರಿಯನ್ನು ಪೂರ್ಣಗೊಳಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಮತ್ತು ಮುಡಾ ಹಗರಣ ವಿಚಾರವಾಗಿ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸರ್ಕಾರದ ವಿರುದ್ಧ ಮುಗಿಬಿದ್ದ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಹಿಂದಿನ ಸರ್ಕಾರದ ಅವಧಿಯಲ್ಲಿನ ನಡೆದಿದೆ ಎನ್ನಲಾದ ಹಗರಣಗಳನ್ನು ಮುನ್ನೆಲೆಗೆ ತರುವುದಾಗಿ ಹೇಳಿತ್ತು. ಇದರ ಬೆನ್ನಲ್ಲೇ ಈಗ ಸಮಿತಿ ರಚನೆ ಮಾಡಿ ಆದೇಶ ಹೊರಡಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ