ಶಿರೂರು ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿರುವ ವ್ಯಕ್ತಿಯ ಪುತ್ರಿಗೆ ಉದ್ಯೋಗ ಕೊಡಿಸಿದ ಎಚ್‌ಡಿಕೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿರುವ ಜಗನ್ನಾಥ ನಾಯ್ಕ ಪುತ್ರಿಗೆ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೈಗಾದ ಕಂಪನಿಯೊಂದರಲ್ಲಿ ಉದ್ಯೋಗ ಕೊಡಿಸಿದ್ದಾರೆ.
ಜಗನ್ನಾಥ ನಾಯ್ಕ ಅವರ ಪುತ್ರಿ ಕೃತಿಕಾ ಅವರಿಗೆ ಕೈಗಾ ಅಣು ವಿದ್ಯುತ್ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿಎಚ್ಇಎಲ್ ಕಂಪನಿಯಲ್ಲಿ ಉದ್ಯೋಗ ನೀಡಲಾಗಿದೆ. ಈ ವಿಷಯವನ್ನು ಕುಮಾರಸ್ವಾಮಿ ಖಚಿತಪಡಿಸಿದ್ದಾರೆ.
ಶಿರೂರು ಗುಡ್ಡಕುಸಿತ ವೀಕ್ಷಣೆಗೆ ಎಚ್‌.ಡಿ.ಕುಮಾರಸ್ವಾಮಿ ಆಗಮಿಸಿದಾಗ ಜಗನ್ನಾಥ ನಾಯ್ಕ ಪುತ್ರಿಗೆ ಉದ್ಯೋಗದ ಭರವಸೆ ನೀಡಿದ್ದರು. ಇದೀಗ ನೀಡಿದ ಭರವಸೆಯಂತೆ ಕೃತಿಕಾ ಅವರಿಗೆ ಉದ್ಯೋಗ ಕೊಡಿಸಿದ್ದಾರೆ. ಜೊತೆಗೆ ಹೆಚ್‌ಡಿ ಕುಮಾರಸ್ವಾಮಿ ಅವರು ಕೃತಿಕಾ ಅವರಿಗೆ ದೂರವಾಣಿ ಕರೆ ಮಾಡಿ ಉದ್ಯೋಗ ಖಾತರಿಪಡಿಸಿದ್ದಾರೆ. ಜಗನ್ನಾಥ ನಾಯ್ಕ ಅವರ ಇನ್ನೊಬ್ಬ ಪುತ್ರಿಗೆ ಕಳೆದವಾರ ಪ್ರವಾಸೋದ್ಯಮ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ರಾಜ್ಯ ಸರ್ಕಾರ ಉದ್ಯೋಗ ಕಲ್ಪಿಸಿತ್ತು.
ಜುಲೈ 16 ರಂದು ಶಿರೂರು ಗ್ರಾಮ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಸಂಭವಿಸಿತ್ತು. ಗುಡ್ಡ ಕುಸಿತದಲ್ಲಿ 11 ಮಂದಿ ಕಾಣೆಯಾಗಿದ್ದು, ಈವರೆಗೆ 8 ಜನರ ಮೃತದೇಹ ಪತ್ತೆಯಾಗಿದೆ.

ಪ್ರಮುಖ ಸುದ್ದಿ :-   ಕನ್ನಡದ ಖ್ಯಾತ ನಟ ಸರಿಗಮ ವಿಜಿ ನಿಧನ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement