ವೀಡಿಯೊ..| ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳ ಮನೆಯಲ್ಲಿ ಗಣಪತಿ ಪೂಜೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ನವದೆಹಲಿಯಲ್ಲಿರುವ ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ಅವರ ನಿವಾಸದಲ್ಲಿ ಬುಧವಾರ ಗಣೇಶ ಪೂಜೆಯಲ್ಲಿ ಪಾಲ್ಗೊಂಡರು.
ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯ ನ್ಯಾಯಮೂರ್ತಿ ಮತ್ತು ಅವರ ಪತ್ನಿ ಕಲ್ಪನಾ ದಾಸ್ ಅವರೊಂದಿಗೆ ಪ್ರಾರ್ಥನೆಗಳನ್ನು ಸಲ್ಲಿಸಿದ್ದಾರೆ. ಗಣೇಶ ಚತುರ್ಥಿ ಆಚರಣೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಬುಧವಾರ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಮನೆಗೆ ಆಗಮಿಸಿದರು.

ಮುಖ್ಯ ನ್ಯಾಯಮೂರ್ತಿ ಮತ್ತು ಅವರ ಪತ್ನಿ ಪ್ರಧಾನಿ ಮೋದಿಯನ್ನು ತಮ್ಮ ನಿವಾಸಕ್ಕೆ ಸ್ವಾಗತಿಸಿದರು. ಮಹಾರಾಷ್ಟ್ರದ ಸಾಂಪ್ರದಾಯಿಕ ಟೋಪಿಯನ್ನು ಧರಿಸಿದ ಪ್ರಧಾನಿ ಮೋದಿ, ಡಿವೈ ಚಂದ್ರಚೂಡ್ ಮತ್ತು ಅವರ ಪತ್ನಿಯೊಂದಿಗೆ ಗಣೇಶನ ಮೂರ್ತಿಯ ಆರತಿ ಮತ್ತು ಪ್ರಾರ್ಥನೆ ಸಲ್ಲಿಸಿದರು.
ಗಣೇಶ ಚತುರ್ಥಿಯನ್ನು ದೇಶಾದ್ಯಂತ ಧಾರ್ಮಿಕ ಶ್ರದ್ಧೆ ಮತ್ತು ಭಕ್ತಿಯಿಂದ ಆಚರಿಸಲಾಗುತ್ತಿದೆ. ಹತ್ತು ದಿನಗಳ ಪವಿತ್ರ ಹಬ್ಬವು ‘ಚತುರ್ಥಿ’ಯಂದು ಪ್ರಾರಂಭವಾಗುತ್ತದೆ ಮತ್ತು ‘ಅನಂತ ಚತುರ್ದಶಿ’ಯಂದು ಮುಕ್ತಾಯವಾಗುತ್ತದೆ.

ಪ್ರಧಾನಿ ಮೋದಿ ಅವರು ಎಲ್ಲಾ ದೇಶವಾಸಿಗಳಿಗೆ ಗಣೇಶ ಚತುರ್ಥಿಯ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ. “ನಾಡಿನ ಸಮಸ್ತ ಜನತೆಗೆ ಗಣೇಶ ಚತುರ್ಥಿಯ ಹೃತ್ಪೂರ್ವಕ ಶುಭಾಶಯಗಳು. ಗಣಪತಿ ಬಪ್ಪಾ ಮೋರಿಯಾ,’ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗಣೇಶ ಚತುರ್ಥಿಯ ಮುನ್ನಾದಿನದಂದು ಜನರಿಗೆ ಶುಭಾಶಯ ಕೋರಿದರು ಮತ್ತು ಹಬ್ಬವು ಸಾಮಾಜಿಕ ಸಾಮರಸ್ಯ ಮತ್ತು ಸಹೋದರತ್ವದ ಸಂದೇಶವನ್ನು ನೀಡುತ್ತದೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ..| ಮಗುವನ್ನು ಎದೆಗವಚಿಕೊಂಡು ಲಾಠಿ ಹಿಡಿದು ದೆಹಲಿ ರೈಲ್ವೆ ನಿಲ್ದಾಣದಲ್ಲಿ ಜನಸಂದಣಿ ನಿಯಂತ್ರಿಸುತ್ತಿರುವ ಮಹಿಳಾ ಕಾನ್​ಸ್ಟೆಬಲ್...!

5 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement