ಬೆಂಗಳೂರು : 402 ಪಿಎಸ್‌ಐ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು (PSI Recruitment Exam) ಸೆ.22ರ ಬದಲಿಗೆ ಸೆ.28ರ ಶನಿವಾರ ನಡೆಸಲು ತೀರ್ಮಾನಿಸಲಾಗಿದೆ ಎಂದು ಗೃಹಸಚಿವ ಜಿ.ಪರಮೇಶ್ವರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡನೇ ಹಂತದಲ್ಲಿ 402 ಹುದ್ದೆಗಳಿಗೆ ನೇಮಕಾತಿ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದ್ದು, ಸೆ.22 ಕ್ಕೆ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿತ್ತು. ಆದರೆ ಯುಪಿಎಸ್‍ಸಿ ಪರೀಕ್ಷೆ ಹಾಗೂ ಪಿಎಸ್‍ಐ ಪರೀಕ್ಷೆ ಒಂದೇ ದಿನ ನಿಗದಿಯಾಗಿತ್ತು. ಈ ವಿಚಾರವಾಗಿ ಐಪಿಎಸ್ ಪರೀಕ್ಷೆ ಮುಂದೂಡುವಂತೆ ಮಾಡಲು ಮನವಿ ಮಾಡಲಾಗಿತ್ತು. ಅದರಂತೆ ಪಿಎಸ್‍ಐ ಪರೀಕ್ಷೆ ಮುಂದೂಡಲಾಗಿದೆ ಎಂದು ಗೃಹಸಚಿವ ಜಿ.ಪರಮೇಶ್ವರ ಹೇಳಿದ್ದಾರೆ.
ಯುಪಿಎಸ್‌ಸಿಗೆ ಸೆ.22 ರಂದೇ ಮುಖ್ಯ ಪರೀಕ್ಷೆ ನಡೆಯುತ್ತಿದೆ. ಈಗಾಗಲೇ ಪ್ರಿಲಿಮ್ಸೌನಲ್ಲಿ ಯಶಸ್ಸು ಗಳಿಸಿ ಮುಖ್ಯ ಪರೀಕ್ಷೆಗೆ ರಾಜ್ಯದಿಂದ 100 ಮಂದಿ ಆಯ್ಕೆಯಾಗಿದ್ದು, ಅವರಿಗೆ ಅವಕಾಶ ತಪ್ಪಿಹೋಗಲಿದೆ ಎಂದು ವಿವರಿಸಲಾಗಿತ್ತು. ಬಿಜೆಪಿಯ ಅಶ್ವತ್ಥನಾರಾಯಣ ಹಾಗೂ ಇತರ ನಾಯಕರು ಕೂಡ ಪರೀಕ್ಷೆ ಮುಂದೂಡುವಂತೆ ಮನವಿ ಮಾಡಿದ್ದರು. ಈ ಬಗ್ಗೆ ಚರ್ಚೆ ನಡೆಸಿದ ನಂತರ ಸೆ.28ರಂದು ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ನಿಮ್ಮ ಕಾಮೆಂಟ್ ಬರೆಯಿರಿ