ಬೆಳಗಾವಿ : ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಬ್ಬೂರ ಪಟ್ಟಣದ ಹನುಮಾನ ನಗರದ ತೋಟದ ಹತ್ತಿರ ಜೆಸಿಬಿಗೆ ಸಿಲುಕಿ ಮೂರು ವರ್ಷದ ಬಾಲಕಿ ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಪೈಪಲೈನ್ ಹರಿ ತೆಗಿಯುವಾಗ ಈ ಧಾರುಣ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಮೃತ ಬಾಲಕಿಯನ್ನು ಭೂಮಿಕಾ ರಮೇಶ ಕೂಕನೂರ (3) ಎಂದು ಗುರುತಿಸಲಾಗಿದೆ. ಪಟ್ಟಣ ಪಂಚಾಯತದ ವತಿಯಿಂದ ಜಲಕುಂಭ ಕಾಮಗಾರಿಯನ್ನು ರಮೇಶ್ ಕೂಕನೂರ ಅವರ ಮನೆಯ ಮುಂದಿನ ರಸ್ತೆಯ ಬಳಿ ಪೈಪ್ಲೈನ್ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಅಲ್ಲೇ ಆಟವಾಡುತ್ತಿದ್ದ ಬಾಲಕಿ ಜೆಸಿಬಿಗೆ ಸಿಲುಕಿ ಮೃತಪಟ್ಟಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಚಿಕ್ಕೋಡಿಯ ಪಿಎಸ್‌ಐ, ಎಎಸ್‌ಐ ಹಾಗೂ ಇತರ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಘಟನೆಯಿಂದಾಗಿ ಮೃತ ಬಾಲಕಿಯ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
ನಿಮ್ಮ ಕಾಮೆಂಟ್ ಬರೆಯಿರಿ