ಅರವಿಂದ ಕೇಜ್ರಿವಾಲಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್‌ : ಆದರೆ…

ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಸಿಬಿಐ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ (ಸೆಪ್ಟೆಂಬರ್ 13) ಅವರಿಗೆ ಜಾಮೀನು ನೀಡಿದೆ.
ನ್ಯಾಯಮೂರ್ತಿ ಸೂರ್ಯಕಾಂತ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು ಕೇಜ್ರಿವಾಲ್‌ಗೆ ಜಾಮೀನು ನೀಡಿದೆ. ಆದಾಗ್ಯೂ, ಜಾಮೀನಿಗೆ ಕೆಲವು ಷರತ್ತುಗಳನ್ನು ವಿಧಿಸಿದೆ, ಇದರಲ್ಲಿ 10 ಲಕ್ಷ ರೂಪಾಯಿ ಬಾಂಡ್ ಮತ್ತು ಇಬ್ಬರು ಭದ್ರತೆಯಾಗಿ ನೀಡಬೇಕು ಎಂದು ಹೇಳಿದೆ.

ಅರವಿಂದ ಕೇಜ್ರಿವಾಲ್ ಜಾಮೀನಿನ ಷರತ್ತುಗಳೇನು…?
ಪ್ರಕರಣದ ಕುರಿತು ಸಾರ್ವಜನಿಕವಾಗಿ ಯಾವುದೇ ಪ್ರತಿಕ್ರಿಯೆ ನೀಡುವಂತಿಲ್ಲ…
ಜಾರಿ ನಿರ್ದೇಶನಾಲಯ (ಇಡಿ) ಪ್ರಕರಣದಲ್ಲಿ ಅರವಿಂದ ಕೇಜ್ರಿವಾಲಗೆ ವಿಧಿಸಲಾದ ಷರತ್ತುಗಳು ಈ ಪ್ರಕರಣಕ್ಕೂ ಅನ್ವಯಿಸುತ್ತವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರತಿಕ್ರಿಯೆ ನೀಡದಂತೆ ಮತ್ತು ವಿಚಾರಣಾ ನ್ಯಾಯಾಲಯಕ್ಕೆ ಸಹಕರಿಸುವಂತೆ ಕೇಜ್ರಿವಾಲ್‌ಗೆ ನ್ಯಾಯಾಲಯ ಸೂಚನೆ ನೀಡಿದೆ. ವಿಚಾರಣಾ ನ್ಯಾಯಾಲಯವು ಅವರ ಜಾಮೀನಿಗೆ ಅಂತಿಮ ಷರತ್ತುಗಳನ್ನು ನಿಗದಿಪಡಿಸುತ್ತದೆ.
ಮುಖ್ಯಮಂತ್ರಿ ಕಚೇರಿಗೆ ಪ್ರವೇಶಿಸುವಂತಿಲ್ಲ…
ಅರವಿಂದ ಕೇಜ್ರಿವಾಲ್‌ ಮುಖ್ಯಮಂತ್ರಿ ಕಚೇರಿ ಮತ್ತು ಸಚಿವಾಲಯಕ್ಕೆ ಪ್ರವೇಶಿಸದಂತೆ ಮತ್ತು ಯಾವುದೇ ಫೈಲ್‌ಗಳಿಗೆ ಸಹಿ ಮಾಡದಂತೆ ನಿರ್ಬಂಧಿಸಲಾಗಿದೆ. ನ್ಯಾಯಮೂರ್ತಿ ಭುಯಾನ್ ಅವರು ಈ ಷರತ್ತುಗಳಿಗೆ ಆಕ್ಷೇಪಣೆಗಳನ್ನು ವ್ಯಕ್ತಪಡಿಸಿದ್ದರೂ, ಅವರು ಅಂತಿಮವಾಗಿ ಅವುಗಳನ್ನು ಒಪ್ಪಿಕೊಂಡರು.
ಕೇಜ್ರಿವಾಲ ಅವರು ಯಾವುದೇ ಸಾಕ್ಷಿಗಳೊಂದಿಗೆ ಸಂವಹನ ನಡೆಸದಂತೆ ನಿರ್ಬಂಧಿಸಲಾಗಿದೆ. ಅಗತ್ಯವಿದ್ದರೆ, ಅವರು ವಿಚಾರಣಾ ನ್ಯಾಯಾಲಯದ ಮುಂದೆ ಹಾಜರಾಗಬೇಕು ಮತ್ತು ಅದಕ್ಕೆ ಸಂಪೂರ್ಣ ಸಹಕಾರವನ್ನು ನೀಡಬೇಕಾಗುತ್ತದೆ.
ವಿಚಾರಣಾ ನ್ಯಾಯಾಲಯದ ಅನುಮತಿ ಇಲ್ಲದೆ ಕೆಳ ನ್ಯಾಯಾಲಯದ ವಿಚಾರಣೆಗೆ ಗೈರಾಗುವಂತಿಲ್ಲ ಎಂದು ಹೇಳಿದೆ.

ಪ್ರಮುಖ ಸುದ್ದಿ :-   ವೀಡಿಯೊ..| ಭಾರತದ 20 ನಗರಗಳ ಮೇಲೆ ಪಾಕಿಸ್ತಾನದಿಂದ ಡ್ರೋನ್ ದಾಳಿ ;ಎಲ್ಲವನ್ನೂ ಹೊಡೆದುರುಳಿಸಿದ ಸೇನೆ...

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement