ದೆಹಲಿ ಅಬಕಾರಿ ನೀತಿ ಪ್ರಕರಣ: ಸಿಬಿಐ ಪ್ರಕರಣದಲ್ಲೂ ಕೇಜ್ರಿವಾಲಗೆ ಸುಪ್ರೀಂ ಕೋರ್ಟ್‌ ಜಾಮೀನು

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಹೂಡಿದ್ದ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌ ಅವರಿಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ಜಾಮೀನು ನೀಡಿದೆ.
ಇದೇ ವೇಳೆ, ಕೇಜ್ರಿವಾಲ್‌ ಅವರಿಗೆ ಜಾಮೀನು ನೀಡಿದ್ದರೂ ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿದ್ದು ಸಿಂಧುವೇ ಆಗಿದೆ. ಅದು ಸಂಬಂಧಿತ ಕಾರ್ಯವಿಧಾನದ ಕಾನೂನುಗಳ ಅನುಸಾರವಾಗಿಯೇ ಇದೆ ಎಂದು ನ್ಯಾಯಮೂರ್ತಿಗಳಾದ ಸೂರ್ಯಕಾಂತ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠ ಹೇಳಿದೆ.
ಸಿಬಿಐ ತಮ್ಮನ್ನು ಬಂಧಿಸಿರುವುದರ ಸಿಂಧುತ್ವ ಹಾಗೂ ತಮಗೆ ಜಾಮೀನು ನೀಡುವಂತೆ ಕೋರಿ ಕೇಜ್ರಿವಾಲ್‌ ಅವರು ಎರಡು ಪ್ರತ್ಯೇಕ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದರು. ಎರಡನೇ ಅರ್ಜಿ ಜಾಮೀನು ಅರ್ಜಿಗೆ ಸಮ್ಮತಿಸಿರುವ ನ್ಯಾಯಾಲಯ ಮೊದಲನೆಯ ಅರ್ಜಿಯನ್ನು ತಿರಸ್ಕರಿಸಿದೆ.

ಈಗಾಗಲೇ ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ವ್ಯಕ್ತಿಯನ್ನು ತನಿಖೆಯ ಉದ್ದೇಶಕ್ಕಾಗಿ ಬಂಧಿಸಲು ಯಾವುದೇ ಅಡ್ಡಿಯಿಲ್ಲ. ಸಿಬಿಐ ತಮ್ಮ ಅರ್ಜಿಯಲ್ಲಿ ನ್ಯಾಯಾಂಗದ ಆದೇಶವಿ ಇದ್ದುದರಿಂದ ಬಂಧನ ಮಾಡಬೇಕಾಯಿತು ಎಂದು ತಿಳಿಸಿದೆ. ಇದು ಕ್ರಿಮಿನಲ್‌ ಪ್ರಕ್ರಿಯಾ ಸಂಹಿತೆಯ ಸೆಕ್ಷನ್‌ 41 (ಎ) (3) ಉಲ್ಲಂಘನೆಯಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ವಾರೆಂಟ್‌ ಹೊರಡಿಸಿದ್ದಾಗ ತನಿಖಾ ಸಂಸ್ಥೆ ಅದಕ್ಕೆ ಕಾರಣ ನೀಡುವುದರಿಂದ ಮುಕ್ತವಾಗಿರುತ್ತದೆ. ಅಪೀಲುದಾರರ ಬಂಧನ ಯಾವುದೇ ಕಾರ್ಯವಿಧಾನದ ಲೋಪದಿಂದ ಬಳಲುತ್ತಿಲ್ಲ. ಹೀಗಾಗಿ ಬಂಧನ ಮಾನ್ಯ ಎಂದು ಪೀಠ ಹೇಳಿದೆ.
ಇದೇ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಬಿಆರ್‌ಎಸ್‌ ನಾಯಕಿ ಕೆ ಕವಿತಾ, ಎಎಪಿ ನಾಯಕರಾದ ಸಂಜಯ್‌ ಸಿಂಗ್‌, ವಿಜಯ ನಾಯರ್‌ ಅವರಿಗೂ ಸುಪ್ರೀಂ ಕೋರ್ಟ್‌ ಈಗಾಗಲೇ ಜಾಮೀನು ನೀಡಿದೆ.

ಪ್ರಮುಖ ಸುದ್ದಿ :-   ವೀಡಿಯೊ..| ರತನ್‌ ಟಾಟಾ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ತನ್ನನ್ನು ರಕ್ಷಿಸಿದ ವ್ಯಕ್ತಿಗೆ ಅಂತಿಮ ನಮನ ಸಲ್ಲಿಸಿದ ಪ್ರೀತಿಯ ನಾಯಿ ʼಗೋವಾʼ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement