ನಾಗಮಂಗಲ ಗಲಭೆ : ಕರ್ನಾಟಕ ಬಿಜೆಪಿಯಿಂದ ‘ಸತ್ಯ ಶೋಧನ ತಂಡ’ ರಚನೆ

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ಮೆರವಣಿಗೆ ಸಂದರ್ಭದಲ್ಲಿ ನಡೆದ ದುರ್ಘಟನೆಯ ಕುರಿತು ಸತ್ಯಾಸತ್ಯತೆ ತಿಳಿಯಲು ರಾಜ್ಯ ಬಿಜೆಪಿಯು ‘ಸತ್ಯ ಶೋಧನ ತಂಡʼವನ್ನು ರಚಿಸಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸೂಚನೆಯ ಮೇರೆಗೆ ಮಾಜಿ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ಅವರ ನೇತೃತ್ವದಲ್ಲಿ ಸತ್ಯ ಶೋಧನ ತಂಡವನ್ನು ರಚನೆ ಮಾಡಲಾಗಿದೆ. ಶಾಸಕ ಬೈರತಿ ಬಸವರಾಜು, ಮಾಜಿ ಸಚಿವ ಕೆ.ಸಿ.ನಾರಾಯಣ ಗೌಡ, ಲಕ್ಷ್ಮೀ ಅಶ್ವಿನ್‌ ಗೌಡ ಹಾಗೂ ನಿವೃತ್ತ ಐಪಿಎಸ್‌ ಅಧಿಕಾರ ಭಾಸ್ಕರ ರಾವ್‌ ತಂಡದ ಇತರ ಸದಸ್ಯರಾಗಿದ್ದಾರೆ. ಇವರಿಗೆ ನಾಗಮಂಗಲ ಗಲಭೆಗೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ತೆರಳಿ, ಪರಿಶೀಲಿಸಿ ಒಂದು ವಾರದೊಳಗೆ ಸಮಗ್ರ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ತಿಳಿಸಲಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಣೆ

ನಿಮ್ಮ ಕಾಮೆಂಟ್ ಬರೆಯಿರಿ

advertisement