ರಾಮನಗರ: ಕಳೆದ ಜೂನ್ ತಿಂಗಳಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರಿಗೆ 2 ರೂಪಾಯಿ ಹೆಚ್ಚಿಸಿದ್ದ ರಾಜ್ಯ ಸರ್ಕಾರ ವಮತ್ತೆ ಹಾಲಿನ ದರವನ್ನು ಹೆಚ್ಚಿಸುವ ಬಗ್ಗೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸುಳಿವು ನೀಡಿದ್ದಾರೆ.
ಶುಕ್ರವಾರ ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ನಂದಿನ ಹಾಲಿನ ದರ ಹೆಚ್ಚಳ ಮಾಡುತ್ತೇವೆ. ನಂದಿನ ಹಾಲಿನ ದರ ಹೆಚ್ಚಳದ ಪ್ರಸ್ತಾವನೆ ಸರ್ಕಾರದ ಮುಂದಿದೆ. ಹಾಲಿನ ದರ ಹೆಚ್ಚಳ ಸಂಬಂಧ ಸಭೆ ಕರೆದು ಮಾತುಕತೆ ನಡೆಸಿ ಹೆಚ್ಚಳ ಮಾಡೋಣಡಲಿದ್ದೇವೆ. ಈ ಬಾರಿ ಹೆಚ್ಚಳ ಮಾಡುವ ದರವನ್ನು ನೇರವಾಗಿ ರೈತರಿಗೆ ವರ್ಗಾಯಿಸುವ ಗುರಿಯಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಇದೇ ವೇಳೆ ಹಾಲಿನ ದರ ಹೆಚ್ಚಳ ಮಾಡಿದಾಗ ಟೀಕಿಸುವ ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, “ನೀವು(ಜೆಡಿಎಸ್ ನಾಯಕರು) ರೈತರ ಮಕ್ಕಳು ಎಂದು ಹೇಳಿಕೊಳ್ಳುತ್ತೀರಿ. ಆದರೆ, ನೀವು ಯಾರಾದರೂ ರೈತರಿಗೆ ಏನಾದರೂ ಮಾಡಿದ್ದೀರಾ ಎಂದು ಪ್ರಶ್ನಿಸಿದರು. ಏನೂ ಮಾಡದೇ ನಾವು ರೈತರ ಮಕ್ಕಳು ಅಂತ ಹೇಳಿಕೊಳ್ಳುತ್ತೀರಿ. ನಾವು ಹಾಲಿನ ದರ 3 ರೂ. ಹೆಚ್ಚಳ ಮಾಡಿ ಅದರ ಲಾಭವನ್ನು ರೈತರಿಗೆ ವರ್ಗಾಯಿಸಲು ಮುಂದಾದರೆ ಅದನ್ನು ವಿರೋಧಿಸುತ್ತೀರಿ ಎಂದು ವಾಗ್ದಾಳಿ ನಡೆಸಿದರು.
2 ರೂ. ಹೆಚ್ಚಳ ಮಾಡಿದ್ದ ಸರ್ಕಾರ…
ಇದೇ ಜೂನ್ ತಿಂಗಳಲ್ಲಿ ಹಾಲಿನ ದರವನ್ನು 2 ರೂ.ಗಳಿಗೆ ಹೆಚ್ಚಳ ಮಾಡಿತ್ತು. ಪ್ರತಿ 1 ಲೀಟರ್ ಹಾಲಿನ ಬೆಲೆ 22 ರೂ.ಗಳಿಂದ 24 ರೂ.ಗಳಿಗೆ ಏರಿಕೆ ಮಾಡಲಾಗಿತ್ತು. ಆಗ ಪ್ಯಾಕ್ ಮೇಲೆ 50 ಮಿಲಿ ಲೀಟರ್ ಹೆಚ್ಚುವರಿ ಹಾಲು ನೀಡಿ ಆ ಹಾಲಿಗೆ 2 ರೂ. ಹೆಚ್ಚಳ ಮಾಡಲಾಗಿದೆ ಎಂದು ದರ ಹೆಚ್ಚಳಕ್ಕೆ ಸಮರ್ಥನೆ ಮಾಡಿಕೊಂಡಿತ್ತು.
ನಿಮ್ಮ ಕಾಮೆಂಟ್ ಬರೆಯಿರಿ