ಜೀವ ಬೆದರಿಕೆ, ಜಾತಿನಿಂದನೆ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನ ಪೊಲೀಸ್​ ವಶಕ್ಕೆ

ಬೆಂಗಳೂರು : ಗುತ್ತಿಗೆದಾರ ಚಲುವರಾಜು ಅವರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪಿತ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೋಲಾರ ಜಿಲ್ಲೆಯ ಮುಳುಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದ್ದು, ಕೋಲಾರದಿಂದ ಆಂಧ್ರದ ಚಿತ್ತೂರಿಗೆ ತೆರಳುತ್ತಿದ್ದಾಗ ಮೊಬೈಲ್ ಫೋನ್ ಲೊಕೇಷನ್ ಆಧಾರದ ಮೇಲೆ ಪತ್ತೆ ಮಾಡಿ ನಂತರ ಪೊಲೀಸರು ಮುಳಬಾಗಲು ತಾಲ್ಲೂಕಿನ ನಂಗಲಿ ಬಳಿ ಕೋಲಾರ ಪೊಲೀಸರು ಸಹಾಯದಿಂದ ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಮುನಿರತ್ನರನ್ನು ವಶಕ್ಕೆ ಪಡೆದಿರುವ ಪೊಲೀಸರು ಬೆಂಗಳೂರಿಗೆ ಕರೆತರುತ್ತಿದ್ದಾರೆ. ಪ್ರಕರಣ ದಾಖಲಾದಾಗಿನಿಂದ ಪೊಲೀಸರು ಶಾಸಕ ಮುನಿರತ್ನ ಮೇಲೆ ನಿಗಾ ವಹಿಸಿದ್ದರು.
ಗುತ್ತಿಗೆದಾರ ಚೆಲುವರಾಜು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಕೊಟ್ಟ ಒಂದೇ ಗಂಟೆಯಲ್ಲಿ ಪೊಲೀಸರು ಮುನಿರತ್ನರನ್ನು ವಶಕ್ಕೆ ಪಡೆದಿದ್ದಾರೆ.
ರೇಣುಕಾಸ್ವಾಮಿಗೆ ಆದ ಗತಿ ನಿನಗೂ ಆಗುತ್ತೆ ಎಂದು ಬೆದರಿಕೆ
ನನ್ನ ಕರೆಸಿ ಬೆದರಿಕೆ ಹಾಕಿ 20 ಲಕ್ಷ ರೂ. ಹಣ ಕೇಳಿದ್ದಾರೆ. ರೇಣುಕಾಸ್ವಾಮಿಗೆ ಆದ ಗತಿ ನಿನಗೂ ಆಗುತ್ತದೆ ನೋಡು ಎಂದು ಬೆದರಿಕೆ ಹಾಕಿದ್ದಾರೆ. ಹಾಗೂ ಜಾತಿ ನಿಂದನೆ ಮಾಡಿದ್ದಾರೆ ಎಂದು ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜು ಆರೋಪಿಸಿದ್ದಾರೆ. ಬಿಜೆಪಿ ಶಾಸಕ ಮುನಿರತ್ನ ಅವರು ಗುತ್ತಿಗೆದಾರ ಚಲುವರಾಜು ಎಂಬುವರಿಗೆ ಅವಾಚ್ಯವಾಗಿ ನಿಂದಿಸಿ, ಜಾತಿ ನಿಂದನೆ ಮಾಡಿದ್ದಾರೆ ಎನ್ನಲಾದ ಆಡಿಯೋ ಸದ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಈ ಸಂಬಂಧ ಶಾಸಕ ಮುನಿರತ್ನ ಅವರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ಕೂಡ ದಾಖಲಾಗಿದೆ. ʼಆ ಆಡಿಯೋ ನನ್ನದೇ ಎಂದು ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆʼ ಎಂದು ಮುನಿರತ್ನ ಹೇಳಿದ್ದರು.

ಪ್ರಮುಖ ಸುದ್ದಿ :-   ವಿಪರೀತ ಮಳೆ: ನಾಳೆ (ಅ.16) ಬೆಂಗಳೂರಿನ ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement