ಗುತ್ತಿಗೆದಾರನಿಗೆ ಜೀವ ಬೆದರಿಕೆ ಆರೋಪ: ಶಾಸಕ ಮುನಿರತ್ನ ವಿರುದ್ಧ 2 ಎಫ್ಐಆರ್ ದಾಖಲು

ಬೆಂಗಳೂರು : ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎರಡು ಎಫ್‌ಆರ್‌ಐ ದಾಖಲಾಗಿವೆ ಎಂದು ತಿಳಿದುಬಂದಿದೆ.
ಜೀವ ಬೆದರಿಕೆ, ಜಾತಿ ನಿಂದನೆ ಮಾಡಿದ ಆರೋಪದಡಿಯಲ್ಲಿ ಅವರ ವಿರುದ್ಧ ಪ್ರತ್ಯೇಕ ಎರಡು ಪ್ರಕರಣ ದಾಖಲಾಗಿವೆ. ಜೀವ ಬೆದರಿಕೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಶಾಸಕ ಮುನಿರತ್ನ ಎ1 ಆರೋಪಿಯಾಗಿದ್ದಾರೆ. ಅವರ ಆಪ್ತ ಸಹಾಯಕ ವಿಜಯಕುಮಾರ ಎ2, ಸೆಕ್ಯೂರಿಟಿ ಅಭಿಷೇಕ ಎ3 ಮತ್ತು ವಸಂತಕುಮಾರ ಎ4 ವಿರುದ್ಧ ಪ್ರಕರಣ ದಾಖಲಾಗಿದೆ.
ಶಾಸಕ ಮುನಿರತ್ನ ವಿರುದ್ಧ ಗುತ್ತಿಗೆದಾರ ಚಲುವರಾಜು ಎಂಬವರು ತಮಗೆ ಕೊಲೆ ಬೆದರಿಕೆ ಹಾಕಿದ್ದಾರೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಜೊತೆಗೆ ತನಗೆ ರಕ್ಷಣ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಶಾಸಕ ಮುನಿರತ್ನ ಅವರು ಸೆಪ್ಟೆಂಬರ್ 9 ರಂದು 20 ಲಕ್ಷ ಹಣ ಕೇಳಿದ್ದರು. ಹಣ ನೀಡದಿದ್ದರೆ ರೇಣುಕಾಸ್ವಾಮಿ ರೀತಿ ಕೊಲೆ ಮಾಡುವುದಾಗಿಯೂ ಮತ್ತು ಜಾತಿ ನಿಂದನೆ ಮಾಡಿದ್ದಾರೆ ಎಂದು ಗುತ್ತಿಗೆದಾರ ಚಲುವರಾಜು ಆರೋಪ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ವಿಜಯಪುರದಲ್ಲಿ ಪಾಕ್ ಪರ ಪೋಸ್ಟ್ ಮಾಡಿದ ವಿದ್ಯಾರ್ಥಿನಿ ; ದೂರಿನ ನಂತರ ಕ್ಷಮೆಯಾಚನೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement