ಹುಬ್ಬಳ್ಳಿ : ಹುಬ್ಬಳ್ಳಿ- ಪುಣೆ ನಡುವೆ ಸಂಚರಿಸಲಿರುವ ವಂದೇ ಭಾರತ್ ಸೇರಿ 6 ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ (ಸೆ.16) ಚಾಲನೆ ನೀಡಲಿದ್ದಾರೆ. ಹುಬ್ಬಳ್ಳಿ- ಪುಣೆ ನಡುವೆ ಸಂಚರಿಸಲಿರುವ ವಂದೇ ಭಾರತ್ ರೈಲು ಕರ್ನಾಟಕದಲ್ಲಿ ಸಂಚರಿಸಲಿರುವ 9ನೇ ವಂದೇ ಭಾರತ್ ರೈಲಾಗಲಿದೆ.
ಸೆ.16ರಂದು ಹುಬ್ಬಳ್ಳಿ- ಪುಣೆ ನಡುವೆ ವಂದೇ ಭಾರತ್ ಎಕ್ಸಪ್ರೆಸ್ ರೈಲು ಸಂಚಾರ ಆರಂಭಿಸಲಿದ್ದು, ಹುಬ್ಬಳ್ಳಿಯಿಂದ ಸೆ.18ರಿಂದ ಸಂಚಾರ ಆರಂಭವಾಗಲಿದೆ ಎಂದು ತಿಳಿಸಲಾಗಿದೆ. ಹುಬ್ಬಳ್ಳಿಯಿಂದ ವಾರದಲ್ಲಿ ಮೂರು ದಿನ ಸಂಚರಿಸಲಿದೆ. ಇದು ಹುಬ್ಬಳ್ಳಿಯಿಂದ ಬುಧವಾರ, ಶುಕ್ರವಾರ, ಭಾನುವಾರ ಹಾಗೂ ಪುಣೆಯಿಂದ ಹುಬ್ಬಳ್ಳಿಯಿಂದ ಹಾಗೂ ಪುಣೆಯಿಂದ ಗುರುವಾರ, ಶನಿವಾರ, ಸೋಮವಾರದಂದು ವಂದೇ ಭಾರತ್ ಎಕ್ಸಪ್ರೆಸ್ ಸಂಚರಿಸಲಿದೆ ಇದು ಹುಬ್ಬಳ್ಳಿ-ಪುಣೆ ನಡುವೆ ನೇರವಾಗಿ ಸಂಚರಿಸಲಿದ್ದು ಕೊಲ್ಲಾಪುರದ ಮೂಲಕ ಸಂಚರಿಸುವುದಿಲ್ಲ ಎಂದೂ ಹೇಳಲಾಗಿದೆ.
ಸೆ.15ರಂದು ಮೋದಿ ಝಾರ್ಖಂಡ್‌ಗೆ ಭೇಟಿ ನೀಡಿದ್ದಾರೆ. ಅಲ್ಲಿ ಅವರು 6 ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಹಸುರು ನಿಶಾನೆ ತೋರಿಸಲಿದ್ದಾರೆ. ಬಳಿಕ ಅವರು ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಪ್ರಧಾನಿ ಮೋದಿ ಅವರು ವಂದೇ ಭಾರತ್ ಮೆಟ್ರೋಗೆ ಚಾಲನೆ ನೀಡಲಿದ್ದಾರೆ. ಸೆ.16ರಂದು ಗಾಂಧಿನಗರದಲ್ಲಿ ನಂತರ ನವೀಕರಿಸಬಹುದಾದ ಇಂಧನ ಹೂಡಿಕೆದಾರರ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ