ಮುಂಬೈ ಮೂಲದ ಮಾಡೆಲ್-ನಟಿಯ ಅಕ್ರಮ ಬಂಧನ ; ಆಂಧ್ರದ ಮೂವರು ಐಪಿಎಸ್ ಅಧಿಕಾರಿಗಳ ಅಮಾನತು

ಅಮರಾವತಿ : ಮುಂಬೈ ಮೂಲದ ಮಾಡೆಲ್ ಹಾಗೂ ನಟಿಯೊಬ್ಬರನ್ನು ಅಕ್ರಮವಾಗಿ ಬಂಧಿಸಿ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರ ಪ್ರದೇಶ ಸರ್ಕಾರ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತು ಮಾಡಿದೆ.
ಅಮಾನತುಗೊಂಡ ಆಂಧ್ರಪ್ರದೇಶದ ಮೂವರು ಐಪಿಎಸ್ ಅಧಿಕಾರಿಗಳಲ್ಲಿ ಡೈರೆಕ್ಟರ್ ಜನರಲ್ ಶ್ರೇಣಿಯ ಒಬ್ಬರು, ಇನ್ಸ್ ಪೆಕ್ಟರ್ ಜನರಲ್ ಮತ್ತು ಇನ್ಸ್ ಪೆಕ್ಟರ್ ಜನರಲ್ ಶ್ರೇಣಿಯ ಒಬ್ಬರು ಮತ್ತು ಸೂಪರಿಂಟೆಂಡೆಂಟ್ ಶ್ರೇಣಿಯ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಪಿಎಸ್ ಆರ್ ಆಂಜನೇಯುಲು (ಡಿಜಿ ಶ್ರೇಣಿ), ಕಂಠಿ ರಾಣಾ ಟಾಟಾ (ಐಜಿ ಶ್ರೇಣಿ) ಮತ್ತು ವಿಶಾಲ್ ಗುನ್ನಿ (ಎಸ್‌ಪಿ ಶ್ರೇಣಿ) ಅಮಾನತುಗೊಂಡ ಮೂವರು ಹಿರಿಯ ಅಧಿಕಾರಿಗಳು.
ನಟಿ ಹಾಗೂ ಮಾಡೆಲ್ ಆಗಿರುವ ಕಾದಂಬರಿ ಜೆಟ್ವಾನಿ ಎಂಬವರು ತಮಗೆ ವಂಚಿಸಿದ್ದಾರೆ ಎಂದು ವೈ ಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕರೊಬ್ಬರು ಫೆಬ್ರವರಿ 2 ರಂದು ಆಂಧ್ರ ಪೊಲೀಸರಿಗೆ ದೂರು ನೀಡಿದ್ದರು. ಈ ವರ್ಷದ ಆರಂಭದಲ್ಲಿ ನಟಿಯನ್ನು ಬಂಧಿಸಲಾಗಿತ್ತು.
ಪಿ. ಸೀತಾರಾಮ ಆಂಜನೆಯಲು ಅವರು ಕಾದಂಬರಿ ಅವರನ್ನು ಬಂಧಿಸಲು ತಮ್ಮ ಅಧೀನದ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಆದರೆ, ಕಾದಂಬರಿ ತಮ್ಮ ಬಂಧನ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡಿದ್ದರು. ಮುಂಬೈನ ಕಾರ್ಪೊರೇಷನ್‌ನ ಉನ್ನತ ಕಾರ್ಯನಿರ್ವಾಹಕರ ವಿರುದ್ಧ ತಾನು ಈ ಹಿಂದೆ ದಾಖಲಿಸಿದ ಪ್ರಕರಣವನ್ನು ಹಿಂದೆಗೆದುಕೊಳ್ಳದಿದ್ದರೆ ಹಿಂದಿನ ಸರ್ಕಾರದ ಅವಧಿಯಲ್ಲಿ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಪೊಲೀಸ್ ಅಧಿಕಾರಿಗಳು ಬೆದರಿಕೆ ಹಾಕಿದ್ದರು ಎಂದು ಕಾದಂಬರಿ ಆರೋಪಿಸಿದ್ದಾರೆ.

ಪ್ರಮುಖ ಸುದ್ದಿ :-   ಕೆನಡಾದಿಂದ ದೊಡ್ಡ ರಾಜತಾಂತ್ರಿಕ ವಿವಾದ ; ಕೆನಡಾದ ಭಾರತೀಯ ಹೈಕಮಿಷನರ್ ನನ್ನು ವಾಪಸ್ ಕರೆಸಿಕೊಳ್ಳಲು ನಿರ್ಧರಿಸಿದ ಸರ್ಕಾರ

ಈ ಕುರಿತು ಇಲಾಖಾ ತನಿಖೆ ನಡೆಸಿದಾಗ ಸೀತಾರಾಮ ಆಂಜನೆಯಲು, ಕಂಠಿ ರಾಣಾ ಟಾಟಾ ಹಾಗೂ ವಿಶಾಲ್ ಗುನ್ನಿ ತಪ್ಪಿತಸ್ಥರೆಂದು ತಿಳಿದು ಬಂದಿದೆ.
ಆಂಧ್ರಪ್ರದೇಶ ಪೊಲೀಸರು ಆರೋಪಗಳ ವಿಚಾರಣೆ ನಡೆಸಿ 1992, 2004 ಮತ್ತು 2010ರ ಬ್ಯಾಚ್ ಅಧಿಕಾರಿಗಳ ವಿರುದ್ಧ ಕಾರ್ಯವಿಧಾನದ ಲೋಪ, ಕರ್ತವ್ಯ ಲೋಪ ಮತ್ತು ದುರ್ನಡತೆ ಆರೋಪದಡಿ ಅಮಾನತು ಆದೇಶ ಹೊರಡಿಸಿದ್ದಾರೆ. ಅಖಿಲ ಭಾರತ ಸೇವೆಗಳ (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳು, 1969 ರ ನಿಯಮ 3 (1) ರ ಅಡಿಯಲ್ಲಿ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.
ಆಗ ರಾಜ್ಯ ಗುಪ್ತಚರ ಮುಖ್ಯಸ್ಥರಾಗಿದ್ದ ಪಿ ಎಸ್ ಆರ್ ಆಂಜನೇಯುಲು ಅವರು ಫೆಬ್ರವರಿ 2 ರಂದು ಎಫ್‌ಐಆರ್ ದಾಖಲಿಸುವ ಮೊದಲೇ ಕಂಠಿ ರಾಣಾ ಟಾಟಾ ಮತ್ತು ವಿಶಾಲ ಗುನ್ನಿ ಅವರನ್ನು ಕರೆಸಿ ಜನವರಿ 31 ರಂದು ನಟಿಯ ಬಂಧನಕ್ಕೆ ನಿರ್ದೇಶನ ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು. ಅಮಾನತು ಆದೇಶದಲ್ಲಿ ಆಂಜನೇಯುಲು ತಮ್ಮ ಅಧಿಕಾರ ಮತ್ತು ಅಧಿಕೃತ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಆಗ ವಿಜಯವಾಡದ ಪೊಲೀಸ್‌ ಆಯುಕ್ತರಾಗಿದ್ದ ಕಂಠಿ ರಾಣಾ ಟಾಟಾ ತನಿಖೆಯನ್ನು ಸರಿಯಾಗಿ ಮೇಲ್ವಿಚಾರಣೆ ಮಾಡಲು ವಿಫಲರಾಗಿದ್ದಾರೆ ಮತ್ತು ಎಫ್‌ಐಆರ್ ದಾಖಲಿಸುವ ಮೊದಲು ಜನವರಿ 31 ರಂದು ತಮ್ಮ ಮೇಲಧಿಕಾರಿಗಳ ಮೌಖಿಕ ಸೂಚನೆಯ ಮೇರೆಗೆ ನಟಿಯನ್ನು ಬಂಧಿಸಲು ಆದೇಶ ಹೊರಡಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊ..| ಪೊಲೀಸ್‌ ಕುಟುಂಬದ ಹತ್ಯೆಯ ಘಟನೆಯ ನಂತರ ಉಪವಿಭಾಗೀಯ ಅಧಿಕಾರಿಯನ್ನು ಬೆನ್ನಟ್ಟಿದ ಉದ್ರಿಕ್ತ ಗುಂಪು...!

ನಟಿಯನ್ನು ಬಂಧಿಸುವ ಮುನ್ನ ದೂರನ್ನು ಕೂಲಂಕುಷವಾಗಿ ಪರಿಶೀಲಿಸಲು ವಿಫಲವಾದ ಆರೋಪವನ್ನು ವಿಶಾಲ ಗುನ್ನಿ ಮೇಲೆ ಹೊರಿಸಲಾಗಿದೆ. ಸರಿಯಾದ ಲಿಖಿತ ಆದೇಶವಿಲ್ಲದೆ ಬಂಧನಕ್ಕಾಗಿ ಫೆಬ್ರವರಿ 2 ರಂದು ಮುಂಬೈಗೆ ಪ್ರಯಾಣಿಸಿದ್ದರು ಮತ್ತು ಮೇಲಧಿಕಾರಿಗಳ ಮೌಖಿಕ ಸೂಚನೆಯಂತೆ ಕಾರ್ಯನಿರ್ವಹಿಸಿದ್ದರು. ಎಫ್‌ಐಆರ್‌ ದಾಖಲಿಸಿದ ಬೆನ್ನಲ್ಲೇ ನಟಿಗೆ ವಿವರಣೆ ನೀಡಲು ಸೂಕ್ತ ಅವಕಾಶ ನೀಡದೆ ಬಂಧಿಸಿದ್ದಾರೆ ಎಂಬ ಆರೋಪವಿದೆ.
ನಟಿ ತನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿ ಇಬ್ರಾಹಿಂಪಟ್ಟಣಂ ಜಿಲ್ಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪೊಲೀಸರು ವೈಎಸ್‌ಆರ್ ಕಾಂಗ್ರೆಸ್ ನಾಯಕ ಮತ್ತು ಇತರರ ವಿರುದ್ಧ ಕ್ರಿಮಿನಲ್ ಕೋಡ್‌ನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಅಧಿಕಾರಿಗಳಾದ ಮಾಜಿ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಕೆ ಹನುಮಂತ ರಾವ್ ಮತ್ತು ಮಾಜಿ ಇಬ್ರಾಹಿಂಪಟ್ಟಣಂ ಇನ್ಸ್‌ಪೆಕ್ಟರ್ ಎಂ ಸತ್ಯನಾರಾಯಣ ಈಗಾಗಲೇ ಅಮಾನತುಗೊಳಿಸಲಾಗಿದೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement