ನಟರಾದ ಅದಿತಿ ರಾವ್ ಹೈದರಿ ಮತ್ತು ಸಿದ್ಧಾರ್ಥ ಮದುವೆಯಾಗಿದ್ದಾರೆ. ಸೋಮವಾರ (ಸೆಪ್ಟೆಂಬರ್ 16) ವನಪರ್ತಿಯಲ್ಲಿರುವ 400 ವರ್ಷಗಳಷ್ಟು ಹಳೆಯದಾದ ದೇವಾಲಯದಲ್ಲಿ ಇಬ್ಬರೂ ಮದುವೆಯಾಗಿದ್ದಾರೆ.
ಅದಿತಿ ಮತ್ತು ಸಿದ್ಧಾರ್ಥ ಅದಿತಿ ರಾವ್ ಹೈದರಿ ಮತ್ತು ಸಿದ್ಧಾರ್ಥ ವನಪರ್ತಿಯಲ್ಲಿರುವ 400 ವರ್ಷಗಳಷ್ಟು ಹಳೆಯದಾದ ದೇವಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಮ್ಮ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಅವರು ಸತಿಪತಿಗಳಾಗಿ ಹಾರ ಬದಲಾಯಿಸಿಕೊಂಡಿದ್ದಾರೆ.
ಅದಿತಿ ರಾವ್ ಹೈದರಿ ತಮ್ಮ ಇನ್‌ಸ್ಟಾಗ್ರಾಮ್ ಹ್ಯಾಂಡಲ್ ನಲ್ಲಿ ಸಿದ್ಧಾರ್ಥ ಅವರೊಂದಿಗಿನ ವಿವಾಹದ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. ಅವರು ದಕ್ಷಿಣ ಭಾರತದ ಸಂಪ್ರದಾಯದಂತೆ ನಡೆದ ವಿವಾಹ ಸಮಾರಂಭದಲ್ಲಿ ಮದುವೆಯಾಗಿದ್ದಾರೆ.
ಖ್ಯಾತ ಮಾಡೆಲ್ ಆಗಿಯೂ ಗುರುತಿಸಿಕೊಂಡಿರುವ ಹೈದರಾಬಾದ್ ಮೂಲದ ಅದಿತಿ ರಾವ್ ಹೈದರಿ ಅವರು ಇದುವರೆಗೆ ಹಿಂದಿ, ತಮಿಳು, ತೆಲುಗಿನಲ್ಲಿ ಮೂವತ್ತಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ನಿರ್ಮಾಪಕ, ನಿರ್ದೇಶಕ, ಕಥೆಗಾರ ಸೇರಿದಂತೆ ಬಹುಮುಖ ಪ್ರತಿಭೆಯ ನಟ ಸಿದ್ಧಾರ್ಥ 40 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.
ಅದಿತಿ ರಾವ್ ಅವರು ಈ ಮೊದಲು ನಟ ಸತ್ಯದೀಪ ಮಿಶ್ರಾ ಎಂಬವರನ್ನು ಮದುವೆಯಾಗಿದ್ದರು. 2012ಕ್ಕೆ ವಿಚ್ಛೇದನ ಪಡೆದಿದ್ದರು. ಸಿದ್ಧಾರ್ಥ ಅವರು 2003ರಲ್ಲಿ ಮೇಘನಾ ಎಂಬವರನ್ನು ಮದುವೆಯಾಗಿದ್ದರು. 2007ರಲ್ಲಿ ವಿಚ್ಛೇದನ ಪಡೆದಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ