ಬೆಳಗಾವಿ : ಜಿಲ್ಲೆಯ ನಿಪ್ಪಾಣಿ ನಗರದ ಹೊರವಲಯದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ತವನಿಧಿ ಘಟ್ಟದ ಕೆಳಗೆ ಭಾನುವಾರ ಸಂಜೆ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಗಾಯಗೊಂಡ 6 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥವನಿಧಿ ಘಾಟ್ ಬಳಿ 8 ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ, ಕಾರಿನಲ್ಲಿದ್ದ ಓರ್ವ ಪ್ರಯಾಣಿಕ ಮೃತಪಟ್ಟಿದ್ದು, 6 ಜನರಿಗೆ ಗಾಯಗಳಾಗಿವೆ. ಸ್ಥಳೀಯ ನಿವಾಸಿ ಜಲೀನ್ (58), ಚಿಕ್ಕೋಡಿ ತಾಲೂಕಿನ ಖಡಕಲಾಟದ ಗಣಪತಿ (45) ಮೃತರು ಎಂದು ಗುರುತಿಸಲಾಗಿದೆ.
ಬೆಳಗಾವಿಯಿಂದ ಕೊಲ್ಹಾಪುರಕ್ಕೆ ಹೋಗುತ್ತಿದ್ದ ಕಂಟೇನರ್ ರಸ್ತೆಯ ಎರಡೂ ಬದಿಯಲ್ಲಿದ್ದ ತಲಾ ಎರಡು ಕಾರು, ಲಾರಿ ಮತ್ತು ಒಂದು ಬೈಕ್ಗೆ ಗುದ್ದಿದೆ. ಬೈಕ್ ಸವಾರ ಗಣಪತಿ ಹಾಗೂ ಕಾರಿನಲ್ಲಿದ್ದ ಜಲೀನ್ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ