ಎಎಪಿ ನಾಯಕಿ ಅತಿಶಿ ದೆಹಲಿಯ ನೂತನ ಮುಖ್ಯಮಂತ್ರಿ

ನವದೆಹಲಿ: ಎಎಪಿ ಪಕ್ಷದ ಶಾಸಕಾಂಗ ಸಭೆಯಲ್ಲಿ ಅರವಿಂದ ಕೇಜ್ರಿವಾಲ್ ಅವರು ದೆಹಲಿಯ ನೂತನ ಮುಖ್ಯಮಂತ್ರಿ ಹುದ್ದೆಗೆ ಸಚಿವೆ ಆತಿಶಿ ಹೆಸರನ್ನು ಪ್ರಸ್ತಾಪಿಸಿದ್ದು, ಪಕ್ಷವು ಸರ್ವಾನುಮತದಿಂದ ಒಪ್ಪಿಗೆ ನೀಡಿದೆ.
ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ ಅವರು ಜಾಮೀನು ಪಡೆದು ಹೊರಬಂದ ಬಳಿಕ ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ದೆಹಲಿ ಜನತೆ ತಮ್ಮನ್ನು ಪ್ರಾಮಾಣಿಕ ಎಂದು ಒಪ್ಪಿಕೊಂಡ ಮೇಲೆ ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದಾಗಿ ಪಕ್ಷದ ಕಾರ್ಯಕರ್ತರೊಂದಿಗಿನ ಸಭೆಯಲ್ಲಿ ಅವರು ಘೋಷಣೆ ಮಾಡಿದ್ದರು.
ಕೇಜ್ರಿವಾಲ್ ಅವರು, ಲೆಫ್ಟಿನಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಕೇಜ್ರಿವಾಲ್ ಅವರ ಅನುಪಸ್ಥಿತಿಯಲ್ಲಿ ಬಹುತೇಕ ಇಲಾಖೆಗಳ ಉಸ್ತುವಾರಿ ಹೊಂದಿದ್ದ ಸಚಿವೆ ಆತಿಶಿ, ಕೇಜ್ರಿವಾಲ್‌ ಅವರ ನಿಷ್ಠರು ಎಂದೇ ಗುರುತಿಸಲಾಗಿದೆ.

ಹರ್ಯಾಣದಿಂದಗೆ ದೆಹಲಿಗೆ ನೀರು ಬಿಡುವಂತೆ ಒತ್ತಾಯಿಸಿ ಅವರು ಉಪವಾಸ ಸತ್ಯಾಗ್ರಹ ಮಾಡಿದ್ದರು. ಅಲ್ಲದೆ ಕೇಜ್ರಿವಾಲ್‌ ವಿರುದ್ಧದ ಆರೋಪಗಳನ್ನು ಖಂಡಿಸಿ ಪ್ರತಿಭಟನೆಯನ್ನೂ ನಡೆಸಿದ್ದರು. ಸ್ವಾತಂತ್ರ್ಯ ದಿನ ಸಮಾರಂಭದಲ್ಲಿ ಧ್ವಜಾರೋಹಣಕ್ಕೆ ಆತಿಶಿ ಹೆಸರನ್ನೇ ಕೇಜ್ರಿವಾಲ್ ಸೂಚಿಸಿದ್ದರು.
ಮಂಗಳವಾರ ನಡೆದ ಎಎಪಿ ಶಾಸಕರ ಸಭೆಯಲ್ಲಿ ಪಕ್ಷದ ನಾಯಕ ದಿಲೀಪ ಪಾಂಡೆ ಅವರು ನೂತನ ಮುಖ್ಯಮಂತ್ರಿಯ ಆಯ್ಕೆಯನ್ನು ಕೇಜ್ರಿವಾಲ್ ನಿರ್ಧರಿಸುವಂತೆ ಪ್ರಸ್ತಾಪಿಸಿದರು. ಎಎಪಿ ರಾಷ್ಟ್ರೀಯ ಸಂಚಾಲಕರು ಅತಿಶಿ ಅವರ ಹೆಸರನ್ನು ಪ್ರಸ್ತಾಪಿಸಿದಾಗ, ಎಲ್ಲಾ ಎಎಪಿ ಶಾಸಕರು ಎದ್ದುನಿಂತು ಅದನ್ನು ಒಪ್ಪಿಕೊಂಡರು ಮತ್ತು ಅತಿಶಿ ಅವರು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದರು.

ಪ್ರಮುಖ ಸುದ್ದಿ :-   ಕೆನಡಾದಿಂದ ದೊಡ್ಡ ರಾಜತಾಂತ್ರಿಕ ವಿವಾದ ; ಕೆನಡಾದ ಭಾರತೀಯ ಹೈಕಮಿಷನರ್ ನನ್ನು ವಾಪಸ್ ಕರೆಸಿಕೊಳ್ಳಲು ನಿರ್ಧರಿಸಿದ ಸರ್ಕಾರ

ಅತಿಶಿ ಈಗ ದೆಹಲಿ ಸರ್ಕಾರದಲ್ಲಿ ಶಿಕ್ಷಣ ಮತ್ತು ಲೋಕೋಪಯೋಗಿ ಇಲಾಖೆಯಂತಹ ಪ್ರಮುಖ ಖಾತೆಗಳನ್ನು ಹೊಂದಿದ್ದಾರೆ. ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದ ಹಳೆಯ ವಿದ್ಯಾರ್ಥಿ ಮತ್ತು ರೋಡ್ಸ್ ಸ್ಕಾಲರ್‌ ಆದ ಅತಿಶಿ ದೆಹಲಿಯ ಶಾಲೆಗಳಲ್ಲಿ ಶಿಕ್ಷಣವನ್ನು ಕೂಲಂಕಷವಾಗಿ ಪರಿಶೀಲಿಸಲು AAP ನ ಪ್ರಮುಖ ಪ್ರಕ್ರಿಯೆಯಲ್ಲಿ ವ್ಯಾಪಕವಾಗಿ ಕೆಲಸ ಮಾಡಿದ್ದಾರೆ.
ಕಲ್ಕಾಜಿಯ ಶಾಸಕರಾಗಿರುವ 43 ವರ್ಷದ ಅತಿಶಿ ದೆಹಲಿಯ ಈಗ ರದ್ದುಗೊಂಡಿರುವ ಮದ್ಯ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಸೋಡಿಯಾ ಅವರನ್ನು ಬಂಧಿಸಿದ ನಂತರ ಕೇಜ್ರಿವಾಲ್‌ ಸರ್ಕಾರದಲ್ಲಿ ಸಚಿವರಾದರು.

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement