ರಾಮನಗರ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಸಾವಿಗೀಡಾದ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಭದ್ರಾಪುರ ಗ್ರಾಮದ ಸಮೀಪ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಮಂಗಳವಾರ (ಸೆ.17) ನಡೆದಿದೆ ಎಂದು ವರದಿಯಾಗಿದೆ.
ಮಾಗಡಿಯಿಂದ ಬೆಂಗಳೂರಿಗೆ ಪ್ರಯಾಣ ಮಾಡುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡದಿದೆ ಎನ್ನಲಾಗಿದ್ದು, ಘಟನೆಯಲ್ಲಿ ಮಾಗಡಿ ಮೂಲದ ಮೂವರು ಮಹಿಳೆಯರು ಸೇರಿ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತದೇಹಗಳನ್ನು ಕಾರಿನಿಂದ ಹೊರ ತೆಗೆದು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಪೂಜಾ ಕಾರ್ಯ ನಿಮಿತ್ತ ದೇವಸ್ಥಾನಕ್ಕೆ ಹೋಗಿ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.
ಕಾರಿನಲ್ಲಿದ್ದ ನಾಯಿ ಮರಿಯೊಂದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದೆ ಎನ್ನಲಾಗಿದ್ದು, ಸದ್ಯ ಅದಕ್ಕೆ ಮಾಗಡಿ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅಪಘಾತ ಸ್ಥಳಕ್ಕೆ ಕುದೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ