ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್ಐಆರ್ ದಾಖಲಾಗಿದೆ.
ನಾಗಮಂಗಲ ಕೋಮುಗಲಭೆಗೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ಹಂಚಿಕೊಂಡ ಆರೋಪದ ಮೇಲೆ ನಾಗಮಂಗಲ ಟೌನ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಾಗಮಂಗಲ ಘಟನೆಗೆ ಸಂಬಂಧಿಸದೇ ಇದ್ದ ವೀಡಿಯೊ ಹಾಗೂ ಫೋಟೋ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ದೊಂಬಿ ಗಲಭೆಗೆ ಪ್ರಚೋದನೆ ಆರೋಪಡಿ ಎಫ್ಐಆರ್ ದಾಖಲಾಗಿದೆ. ಕಲ್ಲು ತೂರಿ, ಬೆಂಕಿ ಹಚ್ಚಿದವರನ್ನ ರಕ್ಷಿಸಿ, ಗಣೇಶನನ್ನು ಬಂಧಿಸಲಾಗಿದೆ ಎಂಬ ಸುಳ್ಳು ಮಾಹಿತಿಯನ್ನು ಶೋಭಾ ಕರಂದ್ಲಾಜೆ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಆರ್ ಅಶೋಕ ಎಲ್ಲೋ ನಡೆದ ಘಟನೆಯ ವೀಡಿಯೊ ಪೋಸ್ಟ್ ಹಾಕಿ ಬೇರೆಡೆ ನಡೆದ 2 ವಿಡಿಯೋ ಲಗತ್ತಿಸಿ ಆರ್ ಅಶೋಕ್ ಪೋಸ್ಟ್ ಮಾಡಿ ನಾಗಮಂಗಲ ಘಟನೆ ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ ಎಂದು ಅಶೋಕ ಹೇಳಿದ್ದರು ದೂರಿನಲ್ಲಿ ತಿಳಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ