ಪಾವಗಡ : ಆಂಬುಲೆನ್ಸ್ ಸಿಗದೆ ಬೈಕಿನಲ್ಲೇ ತಂದೆಯ ಶವ ಸಾಗಿಸಿದ ಪುತ್ರರು…!

ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ವೈ.ಎನ್‌.ಹೊಸಕೋಟೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ 108 ಆಂಬ್ಯುಲೆನ್ಸ್ ಸಿಗದ ಕಾರಣ ತಮ್ಮ ತಂದೆಯ ಮೃತದೇಹವನ್ನು ಮಕ್ಕಳು ಬೈಕಿನಲ್ಲೇ ತಮ್ಮೂರಿಗೆ ಒಯ್ದ ವಿದ್ಯಮಾನ ನಡೆದಿದೆ ಎಂದು ವರದಿಯಾಗಿದೆ.
ದಳವಾಯಿ ಹಳ್ಳಿ ಗ್ರಾಮದ ಗುಡುಗುಲ ಹೊನ್ನೂರಪ್ಪ (80) ಎಂಬವರಿಗೆ ಬುಧವಾರ ಮಧ್ಯಾಹ್ನ ಆರೋಗ್ಯದಲ್ಲಿ ಏರುಪೇರಾಗಿದ್ದು, ಚಿಕಿತ್ಸೆಗಾಗಿ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿತ್ತು. 108 ಆಂಬುಲೆನ್ಸ್​​ನಲ್ಲಿ ಆಸ್ಪತ್ರೆಗೆ ಕರೆತರಲಾಗಿತ್ತು. ವೈದ್ಯರು ಪರಿಶೀಲಿಸಿ ತರುವಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದರು. ನಂತರ ಮೃತದೇಹವನ್ನು ಅದೇ ಆಂಬುಲೆನ್ಸ್​ನಲ್ಲಿ ಗ್ರಾಮಕ್ಕೆ ಕರೆದೊಯ್ಯಲು ವಿಚಾರಿಸಿದಾಗ ಆಸ್ಪತ್ರೆಯಲ್ಲಿ ಆಂಬುಲೆನ್ಸ್‌ ಇರಲಿಲ್ಲ, ಹೀಗಾಗಿ ಮೃತನ ಪುತ್ರರು ಆಂಬುಲೆನ್ಸ್ ಸಿಬ್ಬಂದಿಯನ್ನು ಸಂಪರ್ಕಿಸಿ ಕೇಳಿಕೊಂಡಿದ್ದಾರೆ. ಆದರೆ, 108 ಸಿಬ್ಬಂದಿ ನಮಗೆ ಶವ ಸಾಗಿಸಲು ಅವಕಾಶ ಇಲ್ಲ ಎಂದು ಹೇಳಿದ್ದಾರೆ. ಇದರಿಂದ ಬೇರೆ ದಾರಿ ಕಾಣದೆ ಮೃತನ ಪುತ್ರರು ಗ್ರಾಮಕ್ಕೆ ತಮ್ಮ ಬೈಕ್‌ನಲ್ಲೇ ಮೃತದೇಹ ಸಾಗಿಸಿದ್ದಾರೆ ಎಂದು ಹೇಳಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement