ಬೆಳಗಾವಿ: ಗಣೇಶ ಮೂರ್ತಿ ವಿಸರ್ಜನೆ ವೇಳೆ ಮಂಗಳವಾರ ತಡರಾತ್ರಿ (ಸೆ.17) ರಾಣಿ ಚನ್ನಮ್ಮ ವೃತ್ತದ ಬಳಿ ಮೂವರು ಯುವಕರಿಗೆ ಚಾಕು ಇರಿತ ಮಾಡಲಾಗಿದೆ ಎಂದು ವರದಿಯಾಗಿದೆ.
ಭಾರೀ ಜನಸಂದಣಿಯಲ್ಲಿ ಡಾನ್ಸ್ ಮಾಡುತ್ತಿದ್ದ ವೇಳೆ ಕಾಲು ತಗುಲಿತು ಎಂಬ ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿಯಲಾಗಿದೆ ಎಂದು ಹೇಳಲಾಗುತ್ತಿದೆ. ಗಾಯಾಳುಗಳನ್ನು ಗಾಯಾಳುಗಳನ್ನು ಸಮಾಜ ಕಲ್ಯಾಣ ವಸತಿ ನಿಲಯದ ವಿದ್ಯಾರ್ಥಿಗಳಾದ ಪ್ರವೀಣ ಗುಂಡ್ಯಾಗೋಳ, ದರ್ಶನ ಪಾಟೀಲ ಮತ್ತು ಸತೀಶ ಪೂಜಾರಿ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಾನ್ಸ್ ಮಾಡುತ್ತಿದ್ದ ವೇಳೆ ಕಾಲು ತಗುಲಿತು ಎಂಬ ಕ್ಷುಲ್ಲಕ ಕಾರಣಕ್ಕೆ ಮೆರವಣಿಗೆಯಿಂದ ಹೊರಬಂದು ಗಲಾಟೆ ಮಾಡಿದ್ದಾರೆ. ಈ ವೇಳೆ ಯುವಕರ ಗ್ಯಾಂಗ್ ಮೂವರು ಹಾಸ್ಟೆಲ್ ವಿದ್ಯಾರ್ಥಿಗಳ ಹೊಟ್ಟೆ, ಬೆನ್ನು, ಕುತ್ತಿಗೆ ಭಾಗಕ್ಕೆ ಚಾಕುವಿನಿಂದ ಇರಿದಿದ್ದಾರೆ. ಈ ಸಂಬಂಧ ಕೆಲವರನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ