ಬೆಂಗಳೂರು : ಕರ್ನಾಟಕದ 9ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಕಲಬುರಗಿಯಲ್ಲಿ ಮುಂದಿನ 24 ಗಂಟೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಮುಂದಿನ 5 ದಿನಗಳ ಕಾಲ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಮಲೆನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಮತ್ತು ಉತ್ತರ ಒಳನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ಚದುರಿದಂತೆ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಬಹುತೇಕ ಒಣಹವೆ ಇರುವ ಸಾಧ್ಯತೆಯಿದೆ.
ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯನಗರ, ಗದಗ, ಧಾರವಾಡ, ಬೀದರಿನಲ್ಲಿ ಬಹುತೇಕ ಕಡೆ ಒಣಹವೆ ಇರಲಿದೆ ಎಂದು ತಿಳಿಸಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ