ಬಿಜೆಪಿ ಶಾಸಕ ಮುನಿರತ್ನ ಸೇರಿ 7 ಜನರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಬೆಂಗಳೂರು : ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿನಿಂದನೆ ಮಾಡಿರುವ ಪ್ರಕರಣದ ನಂತರ ಬಿಜೆಪಿ ಶಾಸಕ ಮುನಿರತ್ನಗೆ ಈಗ ಮತ್ತೊಂದು ಕಂಟಕ ಎದುರಾಗಿದೆ. ಬೆಂಗಳೂರು ಮೂಲದ ಮಹಿಳೆಯೊಬ್ಬರು ಶಾಸಕ ಮುನಿರತ್ನ ವಿರುದ್ಧ ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯದ ಆರೋಪ ಮಾಡಿ ದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.
ಬಿಜೆಪಿ ಶಾಸಕ ಮುನಿರತ್ನ ಹಾಗೂ ಇತರ ಆರು ಜನರ ವಿರುದ್ಧ ಅತ್ಯಾಚಾರ ಆರೋಪದಡಿ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಈ ಸಂಬಂಧ ಕೃತ್ಯ ನಡೆದ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಬುಧವಾರ ತಡರಾತ್ರಿ ಅತ್ಯಾಚಾರದ ದೂರು ದಾಖಲಿಸಿದ್ದಾರೆ. ಅತ್ಯಾಚಾರ ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ಬುಧವಾರ ರಾತ್ರಿ ಶಾಸಕ ಮತ್ತು ಇತರ ಆರು ಮಂದಿ ವಿರುದ್ಧ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ.  ಕಗ್ಗಲಿಪುರ ಪೊಲೀಸ್ ಠಾಣಾ ವ್ಯಾಪ್ತಿಯ ರೆಸಾರ್ಟ್‌ನಲ್ಲಿ ಈ ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಶಾಸಕ ಮುನಿರತ್ನ ಸೇರಿ 7 ಜನರ ವಿರುದ್ಧ FIR ದಾಖಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಜಾತಿ ನಿಂದನೆ ಕೇಸ್‌ನಲ್ಲಿ ಬಿಜೆಪಿ ಶಾಸಕ ಮುನಿರತ್ನ ಸಲ್ಲಿಸಿರುವ ಜಾಮೀನು ಅರ್ಜಿ ಭವಿಷ್ಯ ಗುರುವಾರ ನಿರ್ಧಾರವಾಗಲಿದೆ.

ಪ್ರಮುಖ ಸುದ್ದಿ :-   ವಿಪರೀತ ಮಳೆ: ನಾಳೆ (ಅ.16) ಬೆಂಗಳೂರಿನ ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement