ಭೂತಾನ್ ನಿಂದ 17000 ಟನ್ ಅಡಕೆ ಆಮದಿಗೆ ಕೇಂದ್ರದ ಅನುಮತಿ: ರೈತರಿಗೆ ದರ ಕುಸಿತದ ಬಗ್ಗೆ ಆತಂಕ..

ನವದೆಹಲಿ: ಭೂತಾನ್ ನಿಂದ ಕನಿಷ್ಠ ಆಮದು ಬೆಲೆ(MIP)ಯ ಷರತ್ತು ಇಲ್ಲದೆ 17000 ಟನ್ ಹಸಿರು ಅಡಕೆ ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.
ಒಡಿಶಾದ ಹತಿಸರ್ ಮತ್ತು ಅಸ್ಸಾಂನ ದರ್ರಂಗಾದ ಕಸ್ಟಮ್ಸ್ ಸ್ಟೇಷನ್‌ಗಳ ಮೂಲಕ ಈ ಅಡಕೆ ಆಮದು ಮಾಡಿಕೊಳ್ಳಲು ಅನುಮತಿ ನೀಡಿದ್ದು, ಕೇಂದ್ರ ವಾಣಿಜ್ಯ ಸಚಿವಾಲಯ ವ್ಯಾಪ್ತಿಯ ವಿದೇಶಿ ವ್ಯಾಪಾರ ಮಹಾ ನಿರ್ದೇಶನಾಲಯ(DGFT) ಈ ಬಗ್ಗೆ ಅಧಿಸೂಚನೆಯಲ್ಲಿ ತಿಳಿಸಿದೆ.
ಸೆಪ್ಟೆಂಬರ್ 2022 ರಲ್ಲಿ, ಸರ್ಕಾರವು ಪ್ರತಿ ವರ್ಷ ಭೂತಾನ್‌ನಿಂದ ಕನಿಷ್ಠ ಆಮದು ಬೆಲೆ (MIP) ಷರತ್ತಿಲ್ಲದೆ 17,000 ಟನ್ ಹಸಿರು ಅಡಿಕೆಯನ್ನು ಆಮದು ಮಾಡಿಕೊಳ್ಳಲು ಅನುಮತಿ ನೀಡಿತ್ತು.

ಕೇಂದ್ರ ಸರ್ಕಾರ 2017ರಲ್ಲಿ ಪ್ರತಿ ಕೆಜಿ ಅಡಿಕೆಗೆ 251 ರೂ. ಕನಿಷ್ಠ ಆಮದು ಬೆಲೆ ನಿಗದಿಪಡಿಸಿತ್ತು. 2018 ರಲ್ಲಿ, ಒಂದು ಕೆಜಿಗೆ 251 ರೂ.ಗಿಂತ ಹೆಚ್ಚಿದ್ದರೆ ಯಾವುದೇ ರೂಪದಲ್ಲಿ ಅಡಿಕೆ ಆಮದು ಮಾಡಿಕೊಳ್ಳಲು ಅನುಮತಿ ನೀಡಲಾಯಿತು. ಕಳೆದ ವರ್ಷ ಈ ದರವನ್ನು ಕೆಜಿಗೆ 351 ರೂಪಾಯಿಗೆ ಹೆಚ್ಚಳ ಮಾಡಿತ್ತು. ದೇಶದ ಅಡಕೆ ಬೆಳೆಗಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಕ್ರಮ ಕೈಗೊಂಡಿದೆ. ಯಾವುದೇ ದೇಶದಿಂದ ಅಡಿಕೆ ಆಮದು ಮಾಡಿಕೊಂಡರೂ ಈ ಬೆಲೆಗಿಂತ ಕಡಿಮೆ ದರಕ್ಕೆ ಆಮದು ಮಾಡಿಕೊಳ್ಳಬಾರದು ಎಂದು ಹೇಳಲಾಗಿದೆ.
ಭೂತಾನ್ ನಿಂದ ಆಮದು ಮಾಡಿಕೊಳ್ಳುವ ಅಡಿಕೆ ಪ್ರಮಾಣ ಬಹಳ ಕಡಿಮೆ ಇರುವುದರಿಂದ ದರದ ಬಗ್ಗೆ ಆತಂಕವಿಲ್ಲ ಎಂದು ಹೇಳಲಾಗುತ್ತಿದ್ದರೂ  ಇದುದರ ಕುಸಿತಕ್ಕೆ ಕಾರಣವಾಗಬಹುದು ಎಂಬ ಆತಂಕ  ಬೆಳೆಗಾರರ ವಲಯದಲ್ಲಿದೆ. ಭಾರೀ ಮಳೆಯಿಂದ ಅಡಕೆಗೆ ಕೊಳೆ ರೋಗ ವ್ಯಾಪಕವಾಗಿ ಬಂದಿದ್ದು, ಬೆಳೆಗಾರರು ಕಂಗಾಲಾಗಿದ್ದಾರೆ. ಆದರೆ ಈಗ ಭೂತಾನ್‌ ನಿಂದ ದೇಶದದಿಂದ ಹಸಿ ಅಡಕೆ ಆಮದು ಮಾಡಿಕೊಳ್ಳಲು ನಿರ್ಧರಿಸಿದ್ದರಿಂದ ಅಡಕೆ ದರದ ಸ್ಥಿರತೆ ಬಗ್ಗೆ ಆತಂಕ ಎದುರಾಗಿದೆ.

ಪ್ರಮುಖ ಸುದ್ದಿ :-   ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಜಾಮೀನು ನಿರಾಕರಿಸಿದ ನ್ಯಾಯಾಲಯ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement