ಮುಡಾ ವಿಚಾರದಲ್ಲೇ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ…: ಸರ್ಕಾರದಿಂದ ವಿವರ ಕೇಳಿದ ರಾಜ್ಯಪಾಲರು

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ವಿಚಾರದಲ್ಲಿಯೇ ಮತ್ತೊಂದು ಸಂಕಷ್ಟ ಎದುರಾಗಿದೆ. ಮುಡಾ ವಿಚಾರದಲ್ಲಿ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಕೆಯಾಗಿದ್ದು, ಈ ಸಂಬಂಧ ರಾಜ್ಯಪಾಲರು ರಾಜ್ಯ ಸರ್ಕಾರಕ್ಕೆ ವರದಿ ಕೇಳಿದ್ದಾರೆ
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ ಅವರಿಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಈ ಸಂಬಂಧ ಪತ್ರ ಬರೆದು ವರದಿ ಕೇಳಿದ್ದಾರೆ.
ಆಗಸ್ಟ್‌ 27ರಂದು ಮೈಸೂರಿನ ನಟರಾಜ್‌ ಎಂಬವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ಕೊಟ್ಟಿದ್ದರು. ಮುಡಾದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೌಖಿಕ ಸೂಚನೆಯ ಮೇರೆಗೆ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಕಾಯಿದೆ 1987ರ ಕಲಂ 15 ಮತ್ತು 25ಅನ್ನು ಉಲ್ಲಂಘನೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕ್ಷೇತ್ರವಾದ ವರುಣಾ ಹಾಗೂ ಶ್ರೀರಂಗಪಟ್ಟಣದಲ್ಲಿ 387 ಕೋಟಿ ರೂ, ವೆಚ್ಚದ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಸೆಪ್ಟೆಂಬರ್‌ 5 ರಂದು ಪತ್ರ ಬರೆದಿದ್ದು, ಆ ಪತ್ರ ಈಗ ಬಹಿರಂಗವಾಗಿದೆ.
ಪ್ರಾಧಿಕಾರದಲ್ಲಿ ಹಣ ಇಲ್ಲದಿದ್ದರೂ ಕೂಡಾ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದರು ಎಂಬ ಕಾರಣಕ್ಕೆ ಮುಡಾ ಈ ತೀರ್ಮಾನ ಕೈಗೊಂಡಿದೆ. ಇದರಲ್ಲಿ ಪ್ರಾಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದ್ದು, ಈ ಪ್ರಕರಣದ ತನಿಖೆಯನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ದೂರುದಾರರು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ಈ ವಿಚಾರದ ಕುರಿತು ರಾಜ್ಯಪಾಲರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದು ಈ ಬಗ್ಗೆ ವಿವರವಾದ ವರದಿಯನ್ನು ದಾಖಲೆ ಸಮೇತ ನೀಡುವಂತೆ ಸೂಚಿಸಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕ ಮಾಜಿ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ ಹತ್ಯೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement