ಬೆಂಗಳೂರು : ರಾಜ್ಯದ ಎಲ್ಲ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಸ್ಥಾನದಲ್ಲಿ ಪ್ರಸಾದಕ್ಕೆ ಕರ್ನಾಟಕ ಹಾಲು ಒಕ್ಕೂಟ(KMF)ದ ನಂದಿನಿ ತುಪ್ಪವನ್ನೇ ಬಳಸುವಂತೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.
ಧಾರ್ಮಿಕ ದತ್ತಿ ಇಲಾಖೆಯ ಅಡಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ (Muzrai Temple) ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸಬೇಕು. ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕೆಂದು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಆದೇಶದಲ್ಲಿ ಸೂಚಿಸಿದ್ದಾರೆ.
ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿ ಕೊಬ್ಬು ಪತ್ತೆಯಾದ ಬೆನ್ನಲ್ಲಿಯೇ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ತಿರುಪತಿ ದೇವಸ್ಥಾನದ ಲಡ್ಡುಗಳಲ್ಲಿ ದನದ ಕೊಬ್ಬು, ಹಂದಿ ಕೊಬ್ಬು ಹಾಗೂ ಮೀನಿನ ಎಣ್ಣೆ ಬಳಕೆ ಮಾಡಿರುವ ವರದಿ ಬಹಿರಂಗಗೊಂಡ ಬೆನ್ನಲ್ಲೇ ರಾಜ್ಯದ ಎಲ್ಲಾ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪೂಜೆ ಮತ್ತು ಪ್ರಸಾದ ತಯಾರಿಸಲು ನಂದಿನಿ ತುಪ್ಪವನ್ನೇ ಬಳಸುವುದಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಸೂಚಿಸಿದೆ.
ನಿಮ್ಮ ಕಾಮೆಂಟ್ ಬರೆಯಿರಿ