ಕಾರವಾರ : ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಉದ್ಯಮಿಯ ಹತ್ಯೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಹಣಕೋಣದಲ್ಲಿ ಉದ್ಯಮಿಯೊಬ್ಬರ ಬರ್ಬರ ಹತ್ಯೆ ಮಾಡಿರುವ ಘಟನೆ ಭಾನುವಾರ ನಡೆದಿರುವುದು ವರದಿಯಾಗಿದೆ.
ಘಟನೆಯಲ್ಲಿ ವಿನಾಯಕ ನಾಯ್ಕ (54) ಎಂಬವರು ಮೃತಪಟ್ಟಿರುವ ವ್ಯಕ್ತಿಯಾಗಿದ್ದಾರೆ. ಮನೆಯಲ್ಲಿದ್ದ ಪತಿ ಹಾಗೂ ಪತ್ನಿಯ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಉದ್ಯಮಿ ವಿನಾಯಕ ಸಾವಿಗೀಡಾಗಿದ್ದು, ಅವರ ಪತ್ನಿ ಗಂಭೀರಗಾಯಗೊಂಡಿದ್ದಾರೆ
ಇವರಿಬ್ಬರೂ ಪುಣೆಯಲ್ಲಿ ವಾಸವಾಗಿದ್ದರು. ಉದ್ಯಮಿ ವಿನಾಯಕ ನಾಯ್ಕ ಪುಣೆಯಲ್ಲಿ ಎಲೆಕ್ಟ್ರಾನಿಕ್ ವಸ್ತುಗಳ ಆಮದು, ರಫ್ತು ವಹಿವಾಟು ನಡೆಸುತ್ತಿದ್ದು, ಸಾಂತೇರಿ ದೇವರ ಜಾತ್ರೆಗಾಗಿ ತನ್ನ ಊರಾದ ಹಣಕೋಣಕ್ಕೆ ಬಂದಿದ್ದರು. ಕೆಲ ದಿನಗಳಿಂದ ಇಲ್ಲಿಯೇ ವಾಸವಾಗಿದ್ದರು ಎನ್ನಲಾಗಿದೆ.

ಭಾನುವಾರ ನಸುಕಿನ ಜಾವ 5:30ರ ಸುಮಾರಿಗೆ ಅವರ ಹತ್ಯೆ ಮಾಡಲಾಗಿದೆ. ಮೂರ್ನಾಲ್ಕು ಜನರಿದ್ದ ಗುಂಪೊಂದು ಮನೆಗೆ ನುಗ್ಗಿ ಕೃತ್ಯ ನಡೆಸಿದೆ ಎಂದು ಶಂಕಿಸಲಾಗಿದೆ. ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ ಭಾನುವಾರ ಬೆಳಗಿನ ಜಾವ ಮನೆಯೊಳಗೆ ನುಗ್ಗಿದ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಇದರಿಂದಾಗಿ ವಿನಾಯಕ ನಾಯ್ಕ ಮನೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಪತ್ನಿ ತಲೆಗೆ ಗಂಭೀರವಾಗಿ ಗಾಯವಾಗಿದ್ದು, ಕಾರವಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಚಿತ್ತಾಕುಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ : ಮಾಜಿ ಸಚಿವ ಬಿ ನಾಗೇಂದ್ರಗೆ ಷರತ್ತುಬದ್ಧ ಜಾಮೀನು

 

4.7 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement