ಬೆಂಗಳೂರು: ರಾಜ್ಯದ ವಿವಿಧೆಡೆ ಭಾನುವಾರದಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗೆ ಭಾನುವಾರ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಕರಾವಳಿ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಸ್ಥಳಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಸೋಮವಾರ ಕಲಬುರಗಿ, ರಾಯಚೂರು, ಕೊಪ್ಪಳ, ಯಾದಗಿರಿ, ಗದಗ, ಬಳ್ಳಾರಿ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮಂಗಳವಾರ ಬೆಳಗಾವಿ, ಕಲಬುರಗಿ, ವಿಜಯಪುರ, ಬಳ್ಳಾರಿ, ತುಮಕೂರು, ಚಿಕ್ಕಮಗಳೂರು ಶಿವಮೊಗ್ಗ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ.
ಬೆಂಗಳೂರಿನಲ್ಲಿ ಭಾನುವಾರ ಹಾಗೂ ಸೋಮವಾರ ಮೋಡ ಕವಿದ ವಾತಾವರಣ ಇರುವ ಸಾಧ್ಯತೆಯಿದ್ದು, ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಹೇಳಿದೆ.


ನಿಮ್ಮ ಕಾಮೆಂಟ್ ಬರೆಯಿರಿ