ನವದೆಹಲಿ: ವಿವಿಧ ಎಂಟು ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕಾತಿಗೆ ಕೇಂದ್ರ ಸರ್ಕಾರ ಶನಿವಾರ ಅಧಿಸೂಚನೆ ಹೊರಡಿಸಿದೆ.
ಕೇಂದ್ರ ಕಾನೂನು ಸಚಿವ (ಸ್ವತಂತ್ರ ಉಸ್ತುವಾರಿ) ಅರ್ಜುನ್ ರಾಮ್ ಮೇಘವಾಲ್ ಅವರು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಪ್ರಸ್ತುತ ದೆಹಲಿ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿರುವ ಮನಮೋಹನ ಅವರನ್ನು ದೆಹಲಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ. ದೆಹಲಿ ಹೈಕೋರ್ಟ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ನ್ಯಾಯಮೂರ್ತಿ ರಾಜೀವ್ ಶಕ್ಧರ್ ಅವರನ್ನು ಹಿಮಾಚಲ ಪ್ರದೇಶದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.
ದೆಹಲಿ ಹೈಕೋರ್ಟ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ನ್ಯಾಯಮೂರ್ತಿ ಸುರೇಶ್ ಕೈಟ್ ಅವರನ್ನು ಮಧ್ಯಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ. ಕಲ್ಕತ್ತಾ ಹೈಕೋರ್ಟ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ನ್ಯಾಯಮೂರ್ತಿ ಇಂದ್ರಪ್ರಸನ್ನ ಮುಖರ್ಜಿ ಅವರನ್ನು ಮೇಘಾಲಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ.
ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿ ನಿತಿನ್ ಮಧುಕರ ಜಾಮ್ದಾರ್ ಅವರನ್ನು ಕೇರಳ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.
ಪ್ರಸ್ತುತ ಜಮ್ಮು ಕಾಶ್ಮೀರ ಹಾಗೂ ಲಡಾಖ್ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿರುವ ತಾಶಿ ರಬ್ಸ್ತಾನ್ ಅವರನ್ನು ಅದೇ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ.
ಬಾಂಬೆ ಹೈಕೋರ್ಟ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ನ್ಯಾಯಮೂರ್ತಿ ಶ್ರೀರಾಮ್ ಕಲ್ಪತಿ ರಾಜೇಂದ್ರನ್ ಅವರನ್ನು ಮದ್ರಾಸ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ. ಹಿಮಾಚಲ ಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಂ ಎಸ್ ರಾಮಚಂದ್ರ ರಾವ್ ಜಾರ್ಖಂಡ್ ಹೈಕೋರ್ಟ್‌ಗೆ ವರ್ಗಾವಣೆಗೊಂಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ