ಕರ್ನಾಟಕದ 15 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ; ಯೆಲ್ಲೋ ಅಲರ್ಟ್​ ಘೋಷಣೆ

ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಸೆಪ್ಟೆಂಬರ್ 29ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಸೇರಿದಂತೆ ರಾಜ್ಯದ 15 ಜಿಲ್ಲೆಗಳಲ್ಲಿ ಸೆಪ್ಟೆಂಬರ್ ೨೩ರಂದು ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ಮೈಸೂರು, ಮಂಡ್ಯ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬೀದರ್, ಬಾಗಲಕೋಟೆಯಲ್ಲಿ ಸಾಧಾರಣ ಮಳೆಯಾಗಲಿದೆ. ಸೆಪ್ಟೆಂಬರ್‌ 24ರಂದು ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಸೇರಿದಂತೆ ರಾಜ್ಯದ ೮ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ ಹಾಗೂ ಈ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ನೀಡಲಾಗಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು,
ವಿಜಯನಗರ, ಮೈಸೂರು, ಮಂಡ್ಯ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬೀದರ್, ಬಾಗಲಕೋಟೆಯಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement