ಹೈದರಾಬಾದ್: ದೇವಸ್ಥಾನದ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಕಂಡುಬಂದ ಆರೋಪದ ಹಿನ್ನೆಲೆಯಲ್ಲಿ ತಿರುಪತಿ ದೇವಸ್ಥಾನದ ಅವ್ಯವಹಾರದ ತನಿಖೆಗಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ.
ಉಂಡವಳ್ಳಿ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಾಯ್ಡು, “ಇನ್‌ಸ್ಪೆಕ್ಟರ್ ಜನರಲ್ ಅಥವಾ ಅದಕ್ಕಿಂತ ಉನ್ನತ ಅಧಿಕಾರಿಗಳನ್ನು ಒಳಗೊಂಡ ಎಸ್‌ಐಟಿ ರಚಿಸಲಾಗುವುದು. ಇದು ಈ ಬಗ್ಗೆ ತನಿಖೆ ನಡೆಸಿ ಸರ್ಕಾರಕ್ಕೆ ವರದಿಯನ್ನು ನೀಡುತ್ತದೆ. ಇದು ಮರುಕಳಿಸುವುದನ್ನು ತಪ್ಪಿಸಲು ಕಠಿಣ ಕ್ರಮ ಕೈಗೊಳ್ಳಬೇಕಿದೆ (ಲಡ್ಡು ಕಲಬೆರಕೆ), ಇದರಲ್ಲಿ ಯಾವುದೇ ರಾಜಿ ಇಲ್ಲ ಎಂದು ತಿಳಿಸಿದರು.
ಈ ಹಿಂದೆ, ಆಡಳಿತಾರೂಢ ತೆಲುಗು ದೇಶಂ ಪಕ್ಷವು ತಿರುಮಲ ತಿರುಪತಿ ದೇವಸ್ಥಾನಮ್ಸ್ (ಟಿಟಿಡಿ) ಟ್ರಸ್ಟ್‌ನ ಮಾಜಿ ಅಧ್ಯಕ್ಷ ಭೂಮನ ಕರುಣಾಕರ್ ರೆಡ್ಡಿ ಮತ್ತು ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಎವಿ ಧರ್ಮಾ ರೆಡ್ಡಿ ಕಳೆದ ಐದು ವರ್ಷಗಳಿಂದ ದೇವಾಲಯದ ನಿರ್ವಹಣೆಯಲ್ಲಿ ಹಲವಾರು ಅಕ್ರಮಗಳನ್ನು ಎಸಗಿದ್ದಾರೆ ಎಂದು ಆರೋಪಿಸಿತ್ತು.
ತಪ್ಪು ಕಂಡುಬಂದರೆ ಅವರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಪಕ್ಷ ಹೇಳಿದೆ.
ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಆಡಳಿತದಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಮುಖ್ಯಮಂತ್ರಿ ಅವರು ವ್ಯವಸ್ಥೆಯನ್ನು “ಸ್ವಚ್ಛಗೊಳಿಸಲಾಗುವುದು” ಎಂದು ಹೇಳಿದ್ದರು. ಕತಮ್ಮ ಹಿಂದಿನ ಮುಖ್ಯಮಂತ್ರಿ ವೈಎಸ್ ಜಗನ್ಮೋಹನ ರೆಡ್ಡಿ ಅವರು ತಮ್ಮ ನಿಕಟವರ್ತಿಗಳನ್ನು ಟಿಟಿಡಿ ಮಂಡಳಿಯ ಸದಸ್ಯರನ್ನಾಗಿ ನೇಮಿಸಿ ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದರು.
ತಿರುಪತಿ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಕಳೆದ ವಾರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದರು. ಅದರ ನಂತರ, ಎನ್‌ಡಿಡಿಬಿ(NDDB)ಯ ಪ್ರಯೋಗಾಲಯದ ವರದಿಯನ್ನು ಬಿಡುಗಡೆ ಮಾಡಿತು, ಇದು ಹಿಂದಿನ ವೈಎಸ್ ಜಗನ್ಮೋಹನ್ ರೆಡ್ಡಿ ಸರ್ಕಾರದ ಆಳ್ವಿಕೆಯಲ್ಲಿ ತಿರುಪತಿಯಿಂದ ಬಂದ ತುಪ್ಪದ ಮಾದರಿಗಳಲ್ಲಿ ಮೀನಿನ ಎಣ್ಣೆ, ಗೋವಿನ ಕೊಬ್ಬು ಮತ್ತು ಹಂದಿ ಕೊಬ್ಬು ಕಂಡುಬಂದಿರುವುದಾಗಿ ತಿಳಿಸಿದೆ. ಈ ವರದಿಯನ್ನು ಜುಲೈ 17 ರಂದು ಪ್ರಕಟಿಸಲಾಗಿದೆ.
ಜಗ್ನಮೀಹನ ರೆಡ್ಡಿ ಅವರು ಚಂದ್ರಬಾಬು ನಾಯ್ಡು ಅವರನ್ನು ” ಸುಳ್ಳುಗಾರ” ಎಂದು ಆರೋಪಿಸಿದ್ದಾರೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ, ಅವರ ಮಧ್ಯಸ್ಥಿಕೆಗೆ ಒತ್ತಾಯಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ