ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ರಾಜ್ಯದ ವಿವಿಧೆಡೆ ಮಳೆ ಬಿರುಸುಗೊಂಡಿದೆ. ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಸೆಪ್ಟೆಂಬರ್ 24ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ನೀಡಲಾಗಿದೆ. ಇನ್ನು ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಬೀದರ, ಕಲಬುರಗಿ, ಯಾದಗಿರಿಯಲ್ಲಿ ಕೂಡ ಭಾರಿ ಮಳೆ ಸುರಿಯುವ ಸಂಭವ ಇರುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ. ಅಲ್ಲದೆ, ವಿಜಯಪುರ, ರಾಯಚೂರು, ಗದಗ, ಧಾರವಾಡ, ಹಾವೇರಿ, ಬಳ್ಳಾರಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರಿನಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರದಲ್ಲಿ ಮುಂದಿನ 2 ದಿನ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.


ನಿಮ್ಮ ಕಾಮೆಂಟ್ ಬರೆಯಿರಿ