ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ ಪೊಲೀಸ್ ಗುಂಡಿಗೆ ಸಾವು

ನವದೆಹಲಿ: ಮಹಾರಾಷ್ಟ್ರದ ಬದ್ಲಾಪುರ ಪ್ರದೇಶದ ಶಾಲೆಯೊಂದರಲ್ಲಿ ಇಬ್ಬರು ಶಾಲಾ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಜೈಲು ಸೇರಿದ್ದ ಅಕ್ಷಯ್ ಶಿಂಧೆ ಎಂಬ ವ್ಯಕ್ತಿಯನ್ನು ಪೊಲೀಸರು ಸೋಮವಾರ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಆತ ಪೊಲೀಸರ ಮೇಲೆ ದಾಳಿ ಮಾಡಲು ಮುಂದಾದ ಹಿನ್ನೆಲೆಯಲ್ಲಿ ಆತನ ಮೇಲೆ ಗುಂಡು ಹಾರಿಸಲಾಗಿದೆ. ಘಟನೆಯಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ.
ಪೊಲೀಸರ ಪ್ರಕಾರ, ಆರೋಪಿ ಶಿಂಧೆಯನ್ನು ಸಂಜೆ 5:30 ರ ಸುಮಾರಿಗೆ ಜೈಲಿನಿಂದ ಪೊಲೀಸ್ ವಾಹನದಲ್ಲಿ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಪೊಲೀಸರ ಆಯುಧವನ್ನು ಕಸಿದುಕೊಂಡು ಗುಂಡು ಗುಂಡು ಹಾರಿಸಿದ್ದ. ನಂತರ ರಕ್ಷಣೆಗಾಗಿ ಪೊಲೀಸರು ಸಹ ಪ್ರತಿಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆತ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ವರದಿಯಲ್ಲಿ ಹೇಳಲಾಗಿದೆ.
ಶಾಲಾ ಶೌಚಾಲಯದಲ್ಲಿ ನಾಲ್ಕು ಮತ್ತು ಐದು ವರ್ಷದ ಇಬ್ಬರು ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಂಧೆಯನ್ನು ಆಗಸ್ಟ್ 17 ರಂದು ಬಂಧಿಸಲಾಗಿತ್ತು. ಈ ಪ್ರದೇಶದಲ್ಲಿ ನಡೆದ ಪ್ರತಿಭಟನೆಗಳ ನಡುವೆ ಈ ಘಟನೆಯು ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಸಾರ್ವಜನಿಕ ಆಕ್ರೋಶದ ನಂತರ ಮಹಾರಾಷ್ಟ್ರ ಸರ್ಕಾರ ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸಿತ್ತು.

ಪ್ರಮುಖ ಸುದ್ದಿ :-   ವಿಪರೀತ ಮಳೆ: ನಾಳೆ (ಅ.16) ಬೆಂಗಳೂರಿನ ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement