ಉತ್ತರ ಪ್ರದೇಶದ ಬಾಗ್ಪತ್ನಲ್ಲಿ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಯತ್ನವನ್ನು ಕೋತಿಗಳ ದಂಡು ಸಕಾಲಿಕವಾಗಿ ಆಗಮಿಸಿ ತಡೆದಿವೆ. ಯುಕೆಜಿ (UKG) ವಿದ್ಯಾರ್ಥಿನಿ, ನಂತರ ಘಟನೆ ಬಗ್ಗೆ ತನ್ನ ಪೋಷಕರಿಗೆ ವಿವರಿಸಿದ್ದಾಳೆ. ಕೋತಿಗಳು ತನ್ನನ್ನು “ರಕ್ಷಿಸಿವೆ” ಎಂದು ಅವರು ಪೋಷಕರಿಗೆ ತಿಳಿಸಿದ್ದಾಳೆ.
ಸೆಪ್ಟೆಂಬರ್ 20 ರಂದು ಬಾಗ್ಪತ್ನ ದೌಲಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪೋಕ್ಸೋ ಕಾಯ್ದೆಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿರುವ ಆರೋಪಿ ಈಗ ಪರಾರಿಯಾಗಿದ್ದು, ಆತನನ್ನು ಹಿಡಿಯಲು ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಪೊಲೀಸರ ಪ್ರಕಾರ, ಆರೋಪಿ ಆಮಿಷವೊಡ್ಡಿ ಮಗುವನ್ನು ಕರೆದೊಯ್ದು ಆಕೆಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಪ್ರಯತ್ನಿಸಿದ್ದಾನೆ. ಆಗ ಇದ್ದಕ್ಕಿದ್ದಂತೆ ಕೋತಿಗಳು ಸ್ಥಳಕ್ಕೆ ಆಗಮಿಸಿ ಕಿರಿಚಾಡಲು ಪ್ರಾರಂಭಿಸಿದವು. ಆಗ ಹೆದರಿದ ಆರೋಪಿ ಬಾಲಕಿಯನ್ನು ಬಿಟ್ಟು ಓಡಿ ಹೋಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಗ್ರಾಮದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಆರೋಪಿಯು ಬಾಲಕಿಯನ್ನು ಕರೆದುಕೊಂಡು ಹೋಗುತ್ತಿರುವ ದೃಶ್ಯ ಸೆರೆಯಾಗಿದೆ. ದೃಶ್ಯಾವಳಿಗಳಿಂದ ಆರೋಪಿಯ ಪತ್ತೆಗೆ ಪೊಲೀಸರು ಪ್ರಯತ್ನ ನಡೆಸುತ್ತಿದ್ದಾರೆ.
ಆರೋಪ ಬೇರೆ ಗ್ರಾಮದ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿಯ ಮನೆಯ ಹೊರಗೆ ಆಟವಾಡುತ್ತಿರುವುದನ್ನು ಗಮನಿಸಿದ ಆತ ತನ್ನೊಂದಿಗೆ ಬರುವಂತೆ ಮನವೊಲಿಸಿದ ಎಂದು ಅವರು ತಿಳಿಸಿದ್ದಾರೆ. ಆರೋಪಿಯು ನಂತರ ಬಾಲಕಿಯನ್ನು ಯಾರೂ ವಾಸಿಸಿದ ಮನೆಗೆ ಕರೆದೊಯ್ದು ಅತ್ಯಾಚಾರ ಮಾಡಲು ಪ್ರಯತ್ನಿಸಿದ್ದಾನೆ. ವಿರೋಧಿಸಿದರೆ ತನ್ನನ್ನು ಮತ್ತು ತನ್ನ ಕುಟುಂಬ ಸದಸ್ಯರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾಗಿ ಬಾಲಕಿ ತನ್ನ ಪೋಷಕರಿಗೆ ತಿಳಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೋತಿ ದಾಳಿಯ ನಂತರ ಆರೋಪಿ ಅಲ್ಲಿಂದ ಓಡಿಹೋದ ಬಳಿಕ ಹುಡುಗಿ ಮನೆಗೆ ಓಡಿಹೋಗಿ ಘಟನೆಯ ಬಗ್ಗೆ ತನ್ನ ಪೋಷಕರಿಗೆ ತಿಳಿಸಿದ್ದಾಳೆ. ನಂತರ ಆಕೆಯ ಮನೆಯವರು ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ